ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ...
Top Stories
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ
Category: ಹಾವೇರಿ
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4...
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಇವತ್ತು ಸವಣೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರೋ ಬೃಹತ್ ಅಭಿನಂದನಾ ಸಮಾರಂಭಸಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಹುಶಃ, ಶಿಗ್ಗಾವಿ ಕ್ಷೇತ್ರಕ್ಕಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಗಿಫ್ಟ್ ಕೊಡ್ತಾರಾ..? ಅನ್ನೋ ಭರವಸೆ ಯಲ್ಲಿದ್ದಾರೆ ಜನ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರು ಪಟ್ಟಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ಕ್ಷೇತ್ರದ ಜನತೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ, ಕೃತಜ್ಞತೆ ಸಲ್ಲಿಸಲಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ...
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ...
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ...
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್(78) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶಿಲ್ದಾರ್, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು.
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತೀವ್ರ ಕುತೂಹಲ ಮೂಡಿಸಿರುವ ಶಿಗ್ಗಾವಿ ಸವಣೂರು ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕೆ 24 ಘಂಟೆ ಬಾಕಿ ಉಳಿಯುತ್ತಿದ್ದಂತೆ ಯಾಸಿರ್ ಖಾನ್ ಪಠಾಣ ಮೇಲೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರೌಡಿ ಶೀಟ್ ಇರುವ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ಇದೀಗ...
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್ನ ಯಾಸಿರ್ ಅಹ್ಮದಖಾನ್ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ)...