ಸವಣೂರು: ನಡು ರಸ್ತೆಯಲ್ಲೇ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆಯಾಗಿದೆ. ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ, ಅಲಿಯಾಸ್ ಟೈಗರ್ ರಪೀಕ್, ಮಾಮಿನ್ (40) ಬರ್ಬರವಾಗಿ ಹತ್ಯೆಯಾಗಿರೋ ರೌಡಿಶೀಟರ್. ಗೋವಾದಲ್ಲಿ ವಾಸವಾಗಿದ್ದ ರೌಡಿಶೀಟರ್ ನನ್ನು ಇಮ್ರಾನ್ ಎನ್ನುವ 28 ವರ್ಷದ ವ್ಯಕ್ತಿ, ಭೀಕರವಾಗಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಹತ್ಯೆ ಮಾಡಿದ್ದಾನೆ ಅಂತಾ ತಿಳಿದು ಬಂದಿದೆ. ಮೃತ ರೌಡಿಶೀಟರ್ ಹಪ್ತಾ...
Top Stories
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
Category: ಹಾವೇರಿ
ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?
ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ. ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿದ್ಯುತ್ ತಗುಲಿ ಇಬ್ಬರು ರೈತರ ದಾರುಣ ಸಾವು..!
ಶಿಗ್ಗಾವಿ : ಪಂಪ್ ಸೆಟ್ ಚಾಲನೆಗೊಳಿಸಲು ಹೋದ ವೇಳೆ ವಿದ್ಯುತ್ ತಗಲಿ ಇಬ್ಬರು ರೈತರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ರಾತ್ರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಸವನಾಳ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ರೈತರನ್ನು ರೇವಣಯ್ಯ ಪಂಚಾಕ್ಷರಿಮಠ (50) ಮತ್ತು ಯಲ್ಲಪ್ಪ ಹಡಪದ (55) ಎಂದು ಗುರುತಿಸಲಾಗಿದೆ. ತೋಟದಲ್ಲಿನ ಬೋರವೆಲ್ ಗೆ ಸ್ಟಾರ್ಟರ್ ಕೂಡಿಸಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದ್ದು. ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ರೈತರು ಮೃತಪಟ್ಟಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವೀರರಾಣಿ ಚೆನ್ನಮ್ಮಾಜಿಗೆ ನಿಂದನೆ: ಶಿಗ್ಗಾವಿಯಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ..!
ಶಿಗ್ಗಾವಿ : ವೀರರಾಣಿ ಕಿತ್ತೂರ ಚನ್ನಮ್ಮಾಜಿಯವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ವ್ಯಕ್ತಿಯ ವಿರುದ್ದ ಶಿಗ್ಗಾವಿ ನಿಯೋಜಿತ ಚನ್ನಮ್ಮ ಸರ್ಕಲ್‌ನಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಚನ್ನಮ್ಮ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟಿಸಿ, ನಿಂದಿಸಿದ ವ್ಯಕ್ತಿಯ ಪ್ರತಿಕೃತಿ ದಹನ ಮಾಡಿ ಗಡಿಪಾರಿಗೆ ಅಗ್ರಹಿಸಿದ ಘಟನೆ ಸೋಮವಾರ ಜರುಗಿತು. ಶಿಗ್ಗಾವಿಯ ವೈದ್ಯ ಡಾ. ಕುಮಾರಗೌಡ ಪಾಟೀಲ ಅವರೇ ಚನ್ನಮ್ಮನವರ ಬಗ್ಗೆ ನಿಂದಿಸಿದ ವ್ಯಕ್ತಿ ಎಂದು ಹೇಳಲಾಗಿದ್ದು ಶಿಗ್ಗಾವಿ ಪಂಚಮಸಾಲಿ ಸಮಾಜದ ಅದ್ಯಕ್ಷ ಶಿವಾನಂದ ಬಾಗೂರ ಅವರು ಕಾನೂನು ಕ್ರಮಕ್ಕೆ ಒತ್ತಾಯಿಸಿ...
ಶಿಗ್ಗಾವಿ ಶಿಕ್ಷಣ ಇಲಾಖೆ ಮ್ಯಾನೇಜರ್ ಸುರೇಶ್ ರೋಡ್ಡನವರ ಎಸಿಬಿ ಬಲೆಗೆ..!
ಶಿಗ್ಗಾವಿ: ಶಿಗ್ಗಾವಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮ್ಯಾನೇಜರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾನೆ. ವರ್ಗಾವಣೆ ವಿಷಯಕ್ಕೆ ಸಂಭಂದಿಸಿದಂತೆ 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಸುರೇಶ್, 4 ಸಾವಿರಕ್ಕೆ ಡೀಲು ಕುದುರಿಸಿದ್ದ ಎನ್ನಲಾಗಿದ್ದು ಶಿಗ್ಗಾವಿ ಗಾಂಧಿನಗರ LPS ಶಾಲೆಯ ಶಿಕ್ಷಕ ಹನುಮಂತಪ್ಪ ಹಳ್ಳೆಪ್ಪನವರ ಅವರ ದೂರಿನ ಮೇರೆಗೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಸುರೇಶನನ್ನು ವಶಕ್ಕೆ ಪಡೆದಿದ್ದಾರೆ. ಡಾವಣಗೇರಿಯ ಎಸಿಬಿ ಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಎಸಿಬಿ ಅಧಿಕಾರಿಗಳಾದ ಸುದರ್ಶನ ಪಟ್ಟಣಕುಡೆ, ಶ್ರೀಮತಿ ಪ್ರಭಾವತಿ ಸೇಖ್ ಸನದಿ,...
SSLC ಪರೀಕ್ಷೆ ಬರಿಯೊ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸ್ ವಿತರಣೆ..!
ಶಿಗ್ಗಾವಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಂಸದ ಪ್ರಹ್ಲಾದ್ ಜೋಷಿಯವರ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ಶಿಗ್ಗಾವಿ ತಾಲೂಕಿನ ಪ್ರತಿ ಶಾಲೆಯ ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಜ್, ಮತ್ತು ಪಲ್ಸ್ ಆಕ್ಸಿಮೀಟರ್‌ಗಳನ್ನು ನೀಡುವ ಕಾರ್ಯಕ್ಕೆ ಭಾ.ಜ.ಪ ಅದ್ಯಕ್ಷ ಶಿವಾನಂದ ಮ್ಯಾಗೇರಿ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಕ್ಕಳ ಸರ್ವಾಂಗೀಣ ಆರೋಗ್ಯದ ದೃಷ್ಟಿಯಿಂದ ಇಂದಿನ ಮಕ್ಕಳೇ ನಾಳೆಯ ನಾಡಿನ ಪ್ರಜೆಗಳು ಎಂಬ ಸದುದ್ದೇಶದಿಂದ ಮಕ್ಕಳು ಪರೀಕ್ಷೆಗಳನ್ನು ಎದುರಿಸುವ ಕಾರ್ಯಕ್ಕೆ ಮುಕ್ತವಾಗಿ ತಮ್ಮ...
ಅಗ್ನಿಶಾಮಕ ಸಿಬ್ಬಂದಿ ಗಣೇಶ್ ಗೌಡರ್ ಗೆ, ಶಿಗ್ಗಾವಿ ಬಿಜೆಪಿಯಿಂದ ಸನ್ಮಾನ..!
ಶಿಗ್ಗಾವಿ : ಪಟ್ಟಣದ ಶಾಸಕರ ಕಚೇರಿಯಲ್ಲಿ ಶಿಗ್ಗಾವಿಯ ಅಗ್ನಿಶಾಮಕ ಠಾಣೆಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗಣೇಶ್ ಎಂ ಗೌಡರ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ಪ್ರಯುಕ್ತ ಅವರನ್ನು ಭಾಜಪ ತಾಲೂಕಾದ್ಯಕ್ಷ ಶಿವಾನಂದ ಮ್ಯಾಗೇರಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಸನ್ಮಾನಿಸಿ, ಮಾತನಾಡಿದ ಶಿವಾನಂದ ಮ್ಯಾಗೇರಿ, ಅಗ್ನಿಶಾಮಕ ಮತ್ತು ತುರ್ತಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ನಾಗರೀಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಅವರ ಉತ್ತಮ...
ಪೋಷಕರೇ ಗಮನಿಸಿ..! ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಆ ಬಾಲಕನ ಸ್ಥಿತಿ ಹೇಗಾಗಿದೆ ನೋಡಿ..!
ಹಾವೇರಿ: ಕೊರೋನಾ ಹಿನ್ನೆಲೆಯಲ್ಲಿ ಸದ್ಯ ವಿದ್ಯಾರ್ಥಿಗಳಿಗೆ ಎಲ್ಲೆಡೆಯೂ ಆನ್ ಲೈನ್ ಕ್ಲಾಸ್ ಗಳು ಚಾಲ್ತಿಯಲ್ಲಿವೆ. ಹೀಗಾಗಿ, ಪೋಷಕರು ಮಕ್ಕಳ ಕೈಯಲ್ಲಿ ಮೊಬೈಲ್ ಕೊಡಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ರೆ ಹಾಗೆ ಮೊಬೈಲ್ ಕೊಡುವ ಮುನ್ನ ಎಚ್ಚರಿಕೆ ವಹಿಸೋದು ತುಂಬಾ ಮುಖ್ಯ, ಯಾಕಂದ್ರೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಇಂದು ನಡೆದಿರೋ ಈ ಘಟನೆ ನಿಜಕ್ಕೂ ಭಯಾನಕ. ಏನದು ಘಟನೆ..? ಕೊರೋನಾ ಕಾಟದಿಂದ ಶಾಲೆಗಳು ತೆರೆಯದೇ ಇರೋ ಕಾರಣ ಆ ಬಾಲಕ ಮನೆಯಲ್ಲಿ ಹಾಯಾಗಿ ಎಲ್ಲಾ ಮಕ್ಕಳೊಂದಿಗೆ ಖುಷಿಯಾಗಿದ್ದ....
ಪಿಡಿಓ ಮತ್ತು ಗುತ್ತಿಗೆದಾರ ಬಡಿದಾಡಿಕೊಂಡ ದೃಷ್ಯ ಹೇಗಿದೆ ಗೊತ್ತಾ..?
ಶಿಗ್ಗಾವಿ: ಗ್ರಾಮ ಪಂಚಾಯತಿ ಪಿಡಿಓ ಹಾಗೂ ಗುತ್ತಿಗೆದಾರನ ನಡುವೆ ಕೈ-ಕೈ ಮಿಲಾಯಿಸಿದ ಘಟನೆ ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಗ್ರಾಮ ಪಂಚಾಯಿತಿಯ ಆವರಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಓ ಅಶೋಕ್ ಗೋಂದಿ ಅವರನ್ನು ಪಂಚಾಯಿತಿಯ ಗುತ್ತಿಗೆ ಕೆಲಸದ ವಿಷಯವಾಗಿ ಗುತ್ತಿಗೆದಾರ ಮಂಜುನಾಥ ಕಂಕನವಾಡಿ ಅವರ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸಿ, ಬಾಯಿಗೆ ಬಂದಹಾಗೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿಕೊಂಡಿದ್ದಾರೆ. ಘಟನೆ ನಡೆದು ನಂತರ ಪೊಲೀಸ್ ಠಾಣೆ...
ನಮ್ಮ ಮೇಲೆ ಬಂದಿರೋ ಆರೋಪಗಳೇಲ್ಲ ಸುಳ್ಳು, ಸುಳ್ಳು, ಸುಳ್ಳು..! ಕಬನೂರು ಗ್ರಾಪಂ ಅಧ್ಯಕ್ಷರ ಸ್ಪಷ್ಟನೆ..!!
ಶಿಗ್ಗಾವಿ:ತಾಲೂಕಿನ ಕಬನೂರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಕೆಲ ಸದಸ್ಯರ ಸರ್ವಾಧಿಕಾರಿ ಧೋರಣೆ ಆರೋಪಕ್ಕೆ ಸಂಬಂಧಿಸಿದಂತೆ, ಆರೋಪಕ್ಕೆ ಒಳಗಾಗಿದ್ದ ಅಧ್ಯಕ್ಷ ದೇವೇಂದ್ರಪ್ಪ ಸೊರಟೂರ ಅವರು ಬೆಂಬಲಿಗ 6 ಜನ ಸದಸ್ಯರೊಡನೆ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲೆ ಬಂದಿದ್ದ ಆರೋಪಗಳನ್ನು ಸಂಪೂರ್ಣವಾಗಿ ಅಲ್ಲಗಳೆದು ಆರೋಪ ಮಾಡಿರುವ ಸದಸ್ಯರ ಒಪ್ಪಿಗೆಯಿಂದಲೇ ಎಲ್ಲವೂ ನಡೆದಿದೆ ಎಂದು ದಾಖಲೆ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಅಧ್ಯಕ್ಷರ ಆಯ್ಕೆಯಲ್ಲಿ ಅಸಮಾಧಾನ ಗೊಂಡಿರುವ ಸದಸ್ಯರು ಹಾಗೂ ಅದ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕೋಟೆಪ್ಪ ಕಮ್ಮಾರ ಅವರು...