Home ಹಾವೇರಿ

Category: ಹಾವೇರಿ

Post
ಮಗಳ‌ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಎಲ್ಲಿ ಗೊತ್ತಾ..?

ಮಗಳ‌ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಎಲ್ಲಿ ಗೊತ್ತಾ..?

ಸವಣೂರಿನಲ್ಲಿ ಕರುಳು ಹಿಂಡುವ, ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಾಲ‌ಮಾಡಿ ಮಗಳ‌ಮದುವೆ ಮಾಡಿದ್ದ ದಂಪತಿಗಳು ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ತಂದೆ, ತಾಯಿಯ ಸಾವು ಕಂಡ ಮಗಳೂ ಕೂಡ ನೇಣಿಗೆ ಶರಣಾಗಿದ್ದಾಳೆ. ಇದ್ರೊಂದಿಗೆ ಒಂದೇ ಕುಟುಂಬ ಮೂವರು ಸಾವಿನ ಹಾದಿ ಹಿಡಿದಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟಮೆ ನಡೆದಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ...

Post
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!

ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!

ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...

Post
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!

ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!

ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....

Post
ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,

ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,

ಶಿಗ್ಗಾವಿ: ತಾಲೂಕಿನ ಹೊನ್ನಾಪುರ ಬಳಿ ಭೀಕರ ಅಪಘಾತವಾಗಿದೆ. ಶ್ರೀ ಕ್ಷೇತ್ರ ಮೈಲಾರ ದೇವರ ದರ್ಶನಕ್ಕೆಂದು ಹೊರಟ್ಟಿದ್ದವರು ಮಸಣಕ್ಕೆ ಸೇರಿದ್ದಾರೆ. ವೇಗವಾಗಿ ಬಂದ್ ಸ್ವಿಪ್ಟ್ ಕಾರು ಟ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಸ್ಥಳದಲ್ಲೆ ಇಬ್ಬರ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹನುಮಂತಪ್ಪ ಮುಲಗಿ (55), ಚಂದ್ರು ಸಿರಕೋಳ (40) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಹುಬ್ಬಳ್ಳಿ ಸಮೀಪದ ಸೆರೆವಾಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನೂಲ್ವಿ ಗ್ರಾಮದಿಂದ...

Post
ಕಾಡು ಔಡಲ ಬೀಜ ಸೇವಿಸಿ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಕಾಡು ಔಡಲ ಬೀಜ ಸೇವಿಸಿ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಶಿಗ್ಗಾವಿ: ಶಾಲೆಯ ಆವರಣದಲ್ಲೇ ಕಾಡು ಔಡಲ ಬೀಜ ತಿಂದ ಪರಿಣಾಮ, 9 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ತಾಂಡಾದಲ್ಲಿ ನಡೆದಿದೆ. ಇಂದು ಮದ್ಯಾಹ್ನ ಶಾಲೆಯ ಆವರಣದಲ್ಲಿ ಕಾಡ ಔಡಲ ಬೀಜವನ್ನು ಸೇವಿಸಿ ವಾಂತಿ ಹಾಗೂ ಜ್ವರದಿಂದ ಸುಮಾರು 9 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ, ತಕ್ಷಣವೇ ಅಸ್ವಸ್ಥ ವಿದ್ಯಾರ್ಥಿಗಳನ್ನು, ಶಿಗ್ಗಾವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾವುದೇ ವಿದ್ಯಾರ್ಥಿಗಳಿಗೂ ಪ್ರಾಣಾಪಾಯವಿಲ್ಲ ಅಂತಾ ತಿಳಿದು ಬಂದಿದೆ. ವೈದ್ಯರು ಮಕ್ಕಳ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ...

Post
ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಕುಸಿದು ಬಿದ್ದು ಸಾವು..!

ಹಾವೇರಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಕುಸಿದು ಬಿದ್ದು ಸಾವು..!

ಹಾವೇರಿ: ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಮೃತಪಟ್ಟ ಘಟನೆ ನಡೆದಿದೆ. ಏಕಾಏಕಿ ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದು ಸಾವು ಕಂಡಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತ ಶಿಕ್ಷಕರಾಗಿದ್ದಾರೆ. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಘಟನೆ ನಡೆದಿದೆ. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾದ ಶಿಕ್ಷಕ ‌ಮೃತಪಟ್ಟಿದ್ದಾರೆ. ಹೀಗಾಗಿ, ನಿನ್ನೆ...

Post
ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!

ಸಿಎಂ ತವರು ನೆಲದಲ್ಲಿ ಕಂದಾಯ ಮಂತ್ರಿ, ಆರ್.ಅಶೋಕ್ ಗ್ರಾಮ ವಾಸ್ತವ್ಯ..!

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರುಗಳ ಬಗೆ ಬಗೆಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಂದಾಯ ಸಚಿವ ಆರ್‌.ಅಶೋಕ್ ಇಂದು ಗ್ರಾಮ ವಾಸ್ತವ್ಯಕ್ಕಾಗಿ ಬಂದಿಳಿದಿದ್ದಾರೆ. ಹೌದು, ಹಾವೇರಿ ಜಿಲ್ಲಿಯ ಶಿಗ್ಗಾವಿ ತಾಲುಕಿನ ಬಾಡ ಗ್ರಾಮದಲ್ಲಿ ಇಂದು ಕಂದಾಯ ಸಚಿವ ಆರ್.ಅಶೋಕ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕನಕದಾಸರ ಕರ್ಮಭೂಮಿ ಬಾಡದಲ್ಲಿ ನಡೆಯುಲಿರೋ ಕಾರ್ಯಕ್ರಮಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ‌. ಅಲ್ಲದೇ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು...

Post
ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಹಾವೇರಿಯ ಚಾಮುಂಡಿ ಎಕ್ಸ್ ಪ್ರೆಸ್ ಪೀಪೀ ಹೋರಿ ಅಸ್ತಂಗತ, ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!

ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಮಹಾರಾಜನಾಗೇ ಉಳಿದಿದ್ದಾನೆ..! ಯಸ್, ಅವನು ಹಾವೇರಿ ಜಿಲ್ಲೆಯ ಪಾಲಿನ ಮಹಾದಂಡನಾಯಕ.. ಆತನಿಗೆ ಹಾವೇರಿ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ ಆರಾಧಿಸೋ ಯುವ ಪಡೆಯಿದೆ.....

Post
ಕುನ್ನೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಕುನ್ನೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಶಿಗ್ಗಾವಿ: ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಶಿಕ್ಷಣ ಕಲಿಕಾ ದಿನಗಳಲ್ಲಿ ನಾಡು ನುಡಿಯ ಹೆಮ್ಮೆಯ ಸಂಘತಿಗಳ ಕುರಿತು ತಿಳಿದುಕೊಂಡು ನಾಡಿನ ಕೀರ್ತಿ ಬೆಳಗಿದ ಮಹನಿಯರ ಆದರ್ಶಗಳನ್ನು ಪಾಲಿಸುತ್ತ ಹೋದಾಗ ಉತ್ತಮ ರಾಷ್ಟದ ಶಕ್ತಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಶಿಕ್ಷಣ ಪ್ರೇಮಿ ಶಿವಾನಂದ ದೊಡ್ಡಮನಿ ಹೇಳಿದರು. 67ನೇ ಕನ್ನಡ ರಾಜ್ಯೋತ್ಸವದ ನಿಮಿತ್ಯ ಶಿಗ್ಗಾವಿ ತಾಲೂಕ ಕುನ್ನೂರ ಪ್ಲಾಟ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ....

Post
ಶಿಗ್ಗಾವಿ ಯೋಧ ಪಂಜಾಬಿನಲ್ಲಿ ಹುತಾತ್ಮ, ಶೀಲವಂತರ ಸೋಮಾಪುರದಲ್ಲಿ ಮಡುಗಟ್ಟಿದ ಶೋಕ..!

ಶಿಗ್ಗಾವಿ ಯೋಧ ಪಂಜಾಬಿನಲ್ಲಿ ಹುತಾತ್ಮ, ಶೀಲವಂತರ ಸೋಮಾಪುರದಲ್ಲಿ ಮಡುಗಟ್ಟಿದ ಶೋಕ..!

ಶಿಗ್ಗಾವಿ; ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ಯೋಧ ಪಂಜಾಬಿನಲ್ಲಿ ಹುತಾತ್ಮರಾಗಿದ್ದಾರೆ‌. ಶಿವರಾಜ್ ಗದಿಗೆಪ್ಪ ಗಂಗಮ್ಮನವರ್ (23) ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಪಂಜಾಬಿನ ಬಟಿಂಡಾ ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತವಾಗಿ ಮರಣ ಹೊಂದಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ ಯೋಧ ಶಿವರಾಜ್, 2016ರಲ್ಲಿ ಇಂಡಿಯನ್ ಆರ್ಮಿಗೆ ಆಯ್ಕೆಯಾಗಿದ್ದರು. ಇನ್ನು ಶಿಗ್ಗಾವಿ ತಾಲೂಕಿನ ಶೀಲವಂತ ಸೋಮಪುರ ಗ್ರಾಮದಲ್ಲಿ ಮೃತನ ಮನೆಯಲ್ಲಿ ತಂದೆ ಗದಿಗೆಪ್ಪ, ತಾಯಿ ಗೌರಮ್ಮ, 02 ಜನ ಹಿರಿಯ ಸಹೋದರರು (ಒಬ್ಬ ಶಿಕ್ಷಕ,ಇನ್ನೊಬ್ಬರು ವ್ಯವಸಾಯ ಮಾಡುತ್ತಿರುತ್ತಾರೆ) ಹಾಗೂ ಓರ್ವ...

error: Content is protected !!