ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ....
Top Stories
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
Category: ಹಾವೇರಿ
ಸವಣೂರಿನಲ್ಲಿ ನಿನ್ನೆ ನಡೆದ ಮರ್ಡರನ ಎದೆ ನಡುಗಿಸುವ ರಣಭೀಕರ ದೃಷ್ಯ..!
ಸವಣೂರು: ಇಲ್ಲಿನ ಕಾರಡಗಿ ಕ್ರಾಸ್ ಬಳಿ ನಿನ್ನೆ ರವಿವಾರ, ನಡು ರಸ್ತೆಯಲ್ಲೇ ನಡೆದಿದ್ದ ರೌಡಿಶೀಟರ್ ಬರ್ಬರ ಹತ್ಯೆಯ ಭಯಾನಕ ದೃಷ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಚ್ಚು ಹಾಗೂ ಕೊಡಲಿಯಿಂದ ಮನಸೊಯಿಚ್ಚೆ ಹೊಡೆದು ಕೊಂದು ಹಾಕಿದ್ದಾರೆ ಕೊಲೆ ಪಾತಕಿಗಳು. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದ್ದ ಘಟನೆಯಲ್ಲಿ, ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ ಮೂಮಿನ್ ಎಂಬುವ 40 ವರ್ಷ ವಯಸ್ಸಿನ ರೌಡಿಶೀಟರ್ ಬರ್ಬರ ಹತ್ಯೆಯಾಗಿದ್ದ. ಇಮ್ರಾನ್ ಚೌದರಿ (28) ಹಾಗೂ...
ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ..!
ಶಿಗ್ಗಾವಿ : ಅನ್ನದಾನತನ ಮೇಲೆ ಕರಡಿಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ದುಂಢಶಿ ಗ್ರಾಮದ ಬಳಿ ನಡೆದಿದೆ. ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ಎಂಬುವವರೇ ಕರಡಿ ದಾಳಿಗೆ ತುತ್ತಾದವರು. ಇಂದು ತನ್ನ ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ದಾಳಿ ನಡೆಸಿದ ಕರಡಿ, ರೈತನ ಮುಖ,ತಲೆ, ಮೈಮೇಲೆ ಮನಬಂದಂತೆ ಕಚ್ಚಿದೆ. ಪರಿಣಾಮ ರೈತ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಕೆಲಹೊತ್ತು ನರಳಾಡುತ್ತ ಬಿದ್ದಿದ್ದಾನೆ. ನಂತರ, ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆಮಾಡಿ ಗಂಭೀರ...
ಹಾಡಹಗಲೇ ನಡುರಸ್ತೆಯಲ್ಲೇ ಬಿತ್ತು ರೌಡಿಶೀಟರ್ ಹೆಣ..! ಭೀಕರ ಹತ್ಯೆ ಕಂಡು ಬೆಚ್ಚಿಬಿದ್ದ ಸವಣೂರಿನ ಜನ..!!
ಸವಣೂರು: ನಡು ರಸ್ತೆಯಲ್ಲೇ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆಯಾಗಿದೆ. ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ, ಅಲಿಯಾಸ್ ಟೈಗರ್ ರಪೀಕ್, ಮಾಮಿನ್ (40) ಬರ್ಬರವಾಗಿ ಹತ್ಯೆಯಾಗಿರೋ ರೌಡಿಶೀಟರ್. ಗೋವಾದಲ್ಲಿ ವಾಸವಾಗಿದ್ದ ರೌಡಿಶೀಟರ್ ನನ್ನು ಇಮ್ರಾನ್ ಎನ್ನುವ 28 ವರ್ಷದ ವ್ಯಕ್ತಿ, ಭೀಕರವಾಗಿ ನಡುರಸ್ತೆಯಲ್ಲೇ ಅಟ್ಟಾಡಿಸಿ ಹತ್ಯೆ ಮಾಡಿದ್ದಾನೆ ಅಂತಾ ತಿಳಿದು ಬಂದಿದೆ. ಮೃತ ರೌಡಿಶೀಟರ್ ಹಪ್ತಾ...
ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?
ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ. ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿದ್ಯುತ್ ತಗುಲಿ ಇಬ್ಬರು ರೈತರ ದಾರುಣ ಸಾವು..!
ಶಿಗ್ಗಾವಿ : ಪಂಪ್ ಸೆಟ್ ಚಾಲನೆಗೊಳಿಸಲು ಹೋದ ವೇಳೆ ವಿದ್ಯುತ್ ತಗಲಿ ಇಬ್ಬರು ರೈತರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ರಾತ್ರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಸವನಾಳ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ರೈತರನ್ನು ರೇವಣಯ್ಯ ಪಂಚಾಕ್ಷರಿಮಠ (50) ಮತ್ತು ಯಲ್ಲಪ್ಪ ಹಡಪದ (55) ಎಂದು ಗುರುತಿಸಲಾಗಿದೆ. ತೋಟದಲ್ಲಿನ ಬೋರವೆಲ್ ಗೆ ಸ್ಟಾರ್ಟರ್ ಕೂಡಿಸಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದ್ದು. ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ರೈತರು ಮೃತಪಟ್ಟಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವೀರರಾಣಿ ಚೆನ್ನಮ್ಮಾಜಿಗೆ ನಿಂದನೆ: ಶಿಗ್ಗಾವಿಯಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ..!
ಶಿಗ್ಗಾವಿ : ವೀರರಾಣಿ ಕಿತ್ತೂರ ಚನ್ನಮ್ಮಾಜಿಯವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ವ್ಯಕ್ತಿಯ ವಿರುದ್ದ ಶಿಗ್ಗಾವಿ ನಿಯೋಜಿತ ಚನ್ನಮ್ಮ ಸರ್ಕಲ್‌ನಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಚನ್ನಮ್ಮ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟಿಸಿ, ನಿಂದಿಸಿದ ವ್ಯಕ್ತಿಯ ಪ್ರತಿಕೃತಿ ದಹನ ಮಾಡಿ ಗಡಿಪಾರಿಗೆ ಅಗ್ರಹಿಸಿದ ಘಟನೆ ಸೋಮವಾರ ಜರುಗಿತು. ಶಿಗ್ಗಾವಿಯ ವೈದ್ಯ ಡಾ. ಕುಮಾರಗೌಡ ಪಾಟೀಲ ಅವರೇ ಚನ್ನಮ್ಮನವರ ಬಗ್ಗೆ ನಿಂದಿಸಿದ ವ್ಯಕ್ತಿ ಎಂದು ಹೇಳಲಾಗಿದ್ದು ಶಿಗ್ಗಾವಿ ಪಂಚಮಸಾಲಿ ಸಮಾಜದ ಅದ್ಯಕ್ಷ ಶಿವಾನಂದ ಬಾಗೂರ ಅವರು ಕಾನೂನು ಕ್ರಮಕ್ಕೆ ಒತ್ತಾಯಿಸಿ...
ಶಿಗ್ಗಾವಿ ಶಿಕ್ಷಣ ಇಲಾಖೆ ಮ್ಯಾನೇಜರ್ ಸುರೇಶ್ ರೋಡ್ಡನವರ ಎಸಿಬಿ ಬಲೆಗೆ..!
ಶಿಗ್ಗಾವಿ: ಶಿಗ್ಗಾವಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮ್ಯಾನೇಜರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾನೆ. ವರ್ಗಾವಣೆ ವಿಷಯಕ್ಕೆ ಸಂಭಂದಿಸಿದಂತೆ 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಸುರೇಶ್, 4 ಸಾವಿರಕ್ಕೆ ಡೀಲು ಕುದುರಿಸಿದ್ದ ಎನ್ನಲಾಗಿದ್ದು ಶಿಗ್ಗಾವಿ ಗಾಂಧಿನಗರ LPS ಶಾಲೆಯ ಶಿಕ್ಷಕ ಹನುಮಂತಪ್ಪ ಹಳ್ಳೆಪ್ಪನವರ ಅವರ ದೂರಿನ ಮೇರೆಗೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಸುರೇಶನನ್ನು ವಶಕ್ಕೆ ಪಡೆದಿದ್ದಾರೆ. ಡಾವಣಗೇರಿಯ ಎಸಿಬಿ ಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಎಸಿಬಿ ಅಧಿಕಾರಿಗಳಾದ ಸುದರ್ಶನ ಪಟ್ಟಣಕುಡೆ, ಶ್ರೀಮತಿ ಪ್ರಭಾವತಿ ಸೇಖ್ ಸನದಿ,...
SSLC ಪರೀಕ್ಷೆ ಬರಿಯೊ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸ್ ವಿತರಣೆ..!
ಶಿಗ್ಗಾವಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಂಸದ ಪ್ರಹ್ಲಾದ್ ಜೋಷಿಯವರ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ವತಿಯಿಂದ ಶಿಗ್ಗಾವಿ ತಾಲೂಕಿನ ಪ್ರತಿ ಶಾಲೆಯ ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಜ್, ಮತ್ತು ಪಲ್ಸ್ ಆಕ್ಸಿಮೀಟರ್‌ಗಳನ್ನು ನೀಡುವ ಕಾರ್ಯಕ್ಕೆ ಭಾ.ಜ.ಪ ಅದ್ಯಕ್ಷ ಶಿವಾನಂದ ಮ್ಯಾಗೇರಿ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಕ್ಕಳ ಸರ್ವಾಂಗೀಣ ಆರೋಗ್ಯದ ದೃಷ್ಟಿಯಿಂದ ಇಂದಿನ ಮಕ್ಕಳೇ ನಾಳೆಯ ನಾಡಿನ ಪ್ರಜೆಗಳು ಎಂಬ ಸದುದ್ದೇಶದಿಂದ ಮಕ್ಕಳು ಪರೀಕ್ಷೆಗಳನ್ನು ಎದುರಿಸುವ ಕಾರ್ಯಕ್ಕೆ ಮುಕ್ತವಾಗಿ ತಮ್ಮ...
ಅಗ್ನಿಶಾಮಕ ಸಿಬ್ಬಂದಿ ಗಣೇಶ್ ಗೌಡರ್ ಗೆ, ಶಿಗ್ಗಾವಿ ಬಿಜೆಪಿಯಿಂದ ಸನ್ಮಾನ..!
ಶಿಗ್ಗಾವಿ : ಪಟ್ಟಣದ ಶಾಸಕರ ಕಚೇರಿಯಲ್ಲಿ ಶಿಗ್ಗಾವಿಯ ಅಗ್ನಿಶಾಮಕ ಠಾಣೆಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗಣೇಶ್ ಎಂ ಗೌಡರ್ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದ ಪ್ರಯುಕ್ತ ಅವರನ್ನು ಭಾಜಪ ತಾಲೂಕಾದ್ಯಕ್ಷ ಶಿವಾನಂದ ಮ್ಯಾಗೇರಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಸನ್ಮಾನಿಸಿ, ಮಾತನಾಡಿದ ಶಿವಾನಂದ ಮ್ಯಾಗೇರಿ, ಅಗ್ನಿಶಾಮಕ ಮತ್ತು ತುರ್ತಸೇವಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ಸಂದರ್ಭದಲ್ಲಿ ನಾಗರೀಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ಸಲ್ಲಿಸಿರುವ ಅತ್ಯುನ್ನತ ಸೇವೆಯನ್ನು ಹಾಗೂ ಅವರ ಉತ್ತಮ...