Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!

ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಅಂಗನವಾಡಿ ಕಾರ್ಯಕರ್ತೆ ಯಾಗಿ ಕೆಲಸ ಮಾಡುತ್ತಿದ್ದರು. ಜಿಪಂ...

Post
ಮೂಡಸಾಲಿಯಲ್ಲಿ ರೈತನ‌ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಮೂಡಸಾಲಿಯಲ್ಲಿ ರೈತನ‌ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡಸಿ ಗಾಯಗೊಳಿಸಿದ ಘಟನೆ ತಾಲೂಕಿನ ಮುಡಸಾಲಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣ ದುರ್ಗಪ್ಪ ಲಕ್ಮಾಪುರ (45)ಎಂಬವನೆ ಗಾಯಗೊಂಡ ರೈತನಾಗಿದ್ದಾನೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಹಿಂದಿನಿಂದ ಬಂದ ಕರಡಿಯೊಂದು ದಾಳಿ ನಡೆಸಿ ಹಿಂಬದಿ ಕಚ್ಚಿ ಗಾಯಗೊಳಿಸಿದೆ. ಈ ವೇಳೆ ರೈತ ತೀವ್ರ ಚೀರಾಟ ನಡೆಸಿದಾಗ ಕರಡಿ ಅಲ್ಲಿಂದ ಓಡಿ ಹೋಗಿದೆ. ಗಾಯಗೊಂಡ ರೈತನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Post
ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!

ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!

ಮುಂಡಗೋಡಿನಲ್ಲಿ ಅಕ್ಟೊಬರ್ 16 ರಂದು ನಡೆಯುತ್ತಿರೋ ಮುಂಡಗೋಡ ತಾಲೂಕಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಎಸ್. ಪಕ್ಕೀರಪ್ಪ ಆಯ್ಕೆಯಾಗಿದ್ದಾರೆ. ಹೀಗಾಗಿ ಸರ್ವಾಧ್ಯಕ್ಷರಿಗೆ ಸಮ್ಮೇಳನದ ಕಾರ್ಯಕಾರಿ ಸಮಿತಿಯಿಂದ ಅಧಿಕೃತ ಅಹ್ವಾನ ನೀಡಲಾಯಿತು. ತಾಲೂಕಾ ಕಸಾಪ ಅಧ್ಯಕ್ಷ ವಸಂತ ಕೋಣಸಾಲಿ ತಮ್ಮ ಸದಸ್ಯರುಗಳೊಂದಿಗೆ ಸೇರಿ ಎಸ್. ಪಕ್ಕೀರಪ್ಪ ರವರಿಗೆ ಸನ್ಮಾನಿಸಿ ಆಮಂತ್ರಣ ಕೋರಿದ್ರು. ಈ ವೇಳೆ ಎಸ್.ಬಿ.ಹೂಗಾರ, ಸುಭಾಸ್ ವಡ್ಡರ್, ಸಂಗಪ್ಪ ಕೋಳೂರು, ಶ್ರೀಮತಿ ಶಾರದಾ ರಾಠೋಡ, ಎಸ್. ಕೆ. ಬೋರಕರ, ಮಾಜಿ ಸಮ್ಮೇಳನ ಸರ್ವಾಧ್ಯಕ್ಷರು ಹಾಗೂ ಪತ್ರಕರ್ತರಾದ...

Post
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!

ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!

 ಮುಂಡಗೋಡ ತಾಲೂಕಿನ ಇಂದೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಆಯ್ಕೆಯಾಗಿದ್ದಾರೆ. ಅಸಲು, ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ ಆಗಿರೋದು ವಿಶೇಷ. ಶಶಿಧರ್ ಪರವಾಪುರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅಂದಹಾಗೆ, 16 ಸದಸ್ಯ ಬಲದ ಇಂದೂರು ಗ್ರಾಮ ಪಂಚಾಯತಿಯಲ್ಲಿ ನಾಲ್ಕನೇ ಅವಧಿಗೆ ಫಕ್ಕಿರೇಶ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗ್ತಿದಾರೆ. ವಿಚಿತ್ರ ಅಂದ್ರೆ ಈ ಹಿಂದೆ ಇದೇ ಗ್ರಾಮ ಪಂಚಾಯತಿಯಲ್ಲಿ ಪ್ರಾಬಲ್ಯ ಹೊಂದಿದ್ದ ಬಿಜೆಪಿ ಬೆಂಬಲಿತರು ಕೇವಲ ನಾಲ್ಕೇ ಸದಸ್ಯ ಬಲಕ್ಕೆ...

Post
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...

Post
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ....

Post
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!

ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!

ಮುಂಡಗೋಡ ಪಟ್ಟಣದ ಸಂತೆ ಮಾರುಕಟ್ಟೆ ಹತ್ತಿರ ಶ್ರೀಗಂಧ ಮರ ಕಳ್ಳತನ ವಿಫಲ ಯತ್ನ ನಡೆದಿದೆ. ಎಸ್.ನಾರಾಯಣರಾವ್ ಎಂಬುವವರ ಮನೆ ಆವರಣದಲ್ಲಿ ಘಟನೆ ನಡೆದಿದ್ದು ಮರ ಕಡಿದು ಸಾಗಿಸಲಾಗದೇ ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ. ಅಂದಹಾಗೆ, ಇದೇ ಸ್ಥಳದಲ್ಲಿ ಈ ಹಿಂದೆಯೂ ಶ್ರೀಗಂಧದ ಮರಗಳ ಕಳ್ಳತನದ ವಿಫಲ ಯತ್ನಗಳು ನಡೆದಿತ್ತು. ಆದ್ರೆ, ಇವತ್ತು ನಡೆದಿರೋ ಘಟನೆ ಖಚಿತತೆಯಿಂದಲೇ ಕಳ್ಳರು ಬಂದು, ಇನ್ನೇನು ಸಾಗಿಸುವ ಹಂತದಲ್ಲಿ ಅರ್ದಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ....

Post
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!

ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!

ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ರನ್ನು ವರ್ಗಾವಣೆ ಮಾಡಲಾಗಿದೆ. ಯಲ್ಲಾಪುರದ ಇಡಗುಂದಿ ಅರಣ್ಯ ವಲಯಕ್ಕೆ ನಿಯುಕ್ತಿ ಮಾಡಲಾಗಿದ್ದು ಇವ್ರ ಜಾಗಕ್ಕೆ ಅಂದ್ರೆ ಕಾತೂರು ಅರಣ್ಯ ವಲಯಕ್ಕೆ ವೀರೇಶ್ ಎಂಬುವವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Post
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ‌. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...

Post
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ

error: Content is protected !!