ಮುಂಡಗೋಡ- ತಾಲೂಕಿನ ಹುನಗುಂದ, ಕೊಪ್ಪ, ಇಂದೂರು, ನಂದಿಕಟ್ಟಾ ಸೇರಿದಂತೆ ತಾಲೂಕಿನಾದ್ಯಂತ ಇಂದು ಹಲವು ಗ್ರಾಮಗಳಲ್ಲಿ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನ ಆಚರಿಸಲಾಯಿತು. ಬಿಜೆಪಿ ಕಾರ್ಯಕರ್ತರು, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಹುನಗುಂದ ಗ್ರಾಮದ ಶಕ್ತಿಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ, ಬೂತ್ ಗಳ ಅಧ್ಯಕ್ಷರುಗಳು, ಗ್ರಾಮಗಳ ಪ್ರಮುಖರು, ಬಿಜೆಪಿಯ ಹಿರಿಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.
Top Stories
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?
ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!
ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ- ಸಿಎಂ ಸಿದ್ಧರಾಮಯ್ಯ
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
Category: ಮುಂಡಗೋಡ ಸುದ್ದಿ
ನಂದಿಕಟ್ಟಾ ಪಿಡಿಓ ಮೇಲೆ ಹಲ್ಲೆಗೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಗ್ರಾಪಂ ನೌಕರರ ಒತ್ತಾಯ..!
ಮುಂಡಗೋಡ: ಪಂಚಾಯತ ಅಭಿವೃದ್ಧಿ ಅಧಿಕಾರಿ ವೆಂಕಪ್ಪ ಲಮಾಣಿಯವರ ಮೇಲೆ ದೈಹಿಕ ಹಲ್ಲೆ ನಡೆಸಿದವರ ಮೇಲೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಪಂಚಾಯತಿ ಪಿಡಿಓಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮನವಿ ಅರ್ಪಿಸಿದ್ರು. ನಂದಿಕಟ್ಟಾ ಗ್ರಾಮ ಪಂಚಾಯತ ಪಿಡಿಓ ವೆಂಕಪ್ಪ ಕೆ.ಲಮಾಣಿ ರವರ ಮೇಲೆ ದೈಹಿಕ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗೌಸುಸಾಬ ಮೌಲಾಲಿ ಯಳ್ಳುರ ಎಂಬುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಅಪರಾಧಿಗೆ ತಕ್ಕೆ ಶಿಕ್ಷೆಯಾಗಬೇಕು...
ಏಕಾಏಕಿ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದು ನರಳಾಡಿದ್ಲು ಯುವತಿ, ಭಯಬಿಟ್ಟು ಕಾಪಾಡಿದ್ರು ಮುಂಡಗೋಡಿಗರು..!
ನಿಜಕ್ಕೂ ಮುಂಡಗೋಡಿನ ಮಣ್ಣ ಕಣಕಣದಲ್ಲೇ ಮಾನವೀಯತೆ ಇದೆ ಅನ್ನೋದಕ್ಕೆ ಇವತ್ತಿನ ಈ ಘಟನೆಯೇ ಸಾಕ್ಷಿ. ಯುವತಿಯೊಬ್ಳು ರಸ್ತೆಯ ಮದ್ಯದಲ್ಲೇ ಪ್ರಜ್ಞಾಹೀನವಾಗಿ ಬಿದ್ದಾಗ ಸಾರ್ವಜನಿಕರೇ ಆ ಯುವತಿಯನ್ನ ಆಸ್ಪತ್ರೆಗೆ ಸೇರಿಸಿರೋ ಘಟನೆ ನಡೆದಿದೆ. ಏನಾಯ್ತು..? ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ಸಮೀಪ ಬಂಕಾಪುರ ರಸ್ತೆಯಲ್ಲಿ ಇಂದು ಮದ್ಯಾಹ್ನ ಓರ್ವ ಯುವತಿ ಏಕಾಏಕಿ ಪ್ರಜ್ಞೆ ತಪ್ಪಿ ರಸ್ತೆಯಲ್ಲೆ ಬಿದ್ದಿದ್ದಾಳೆ. ಆ ಹೊತ್ತಲ್ಲಿ ಆಕೆಯ ಜೊತೆಗಿದ್ದ ಓರ್ವ ಅಜ್ಜಿ ಆತಂಕದಲ್ಲಿ ಚೀರಾಟ ಶುರುವಿಟ್ಟಿದ್ದಾಳೆ. ಆ ಕ್ಷಣ ನಿಜಕ್ಕೂ ಈ ಘಟನೆ ಯಾರಿಗೂ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...
ಮುಂಡಗೋಡಿನಲ್ಲಿ ಪೋಟೋ ಸ್ಟುಡಿಯೋ, ಮೊಬೈಲ್ ಅಂಗಡಿ ದೋಚಿದ್ದ ಕಳ್ಳ ಅಂದರ್..!
ಮುಂಡಗೋಡ: ಪಟ್ಟಣದಲ್ಲಿ ಸೆಪ್ಟೆಂಬರ್ 3 ರ ರಾತ್ರಿ ನಡೆದಿದ್ದ , ಪೋಟೊ ಸ್ಟುಡಿಯೋ ಹಾಗೂ ಮೊಬೈಲ್ ಅಂಗಡಿ ಕಳ್ಳತನ ಪ್ರಕರಣದ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಾಳಬಾವಿಕೇರಿಯ ಇಮಾಮಸಾಬ ದಾವಲಸಾಬ ಅಲ್ಲಿಬಾಯಿ (21) ಎಂಬುವವನೇ ಕಳ್ಳತನದ ಆರೋಪಿಯಾಗಿದ್ದಾನೆ. ಬಂಧಿತ ಅಂತರ್ ಜಿಲ್ಲಾ ಕಳ್ಳನಿಂದ ಪೇನಾಸಾನಿಕ್ ಎ.ಜಿ.ಎಸ್.ಸಿ-90 ವಿಡಿಯೋ ಕ್ಯಾಮರಾ, ನಿಕಾನ್ ಡಿ- 3500 ಡಿ.ಎಸ್.ಎಲ್.ಆರ್ ಫೋಟೋ ಕ್ಯಾಮರಾ, 20 ಮೊಬೈಲ್ ಗಳು ಹಾಗೂ ಮೊಬೈಲ್ ನ ಬಿಡಿ ಭಾಗಗಳು ಸೇರಿ, ಸುಮಾರು...
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ, ತಹಶೀಲ್ದಾರ ಕಚೇರಿಯೆದರು ಪ್ರತಿಭಟನೆ..!
ಮುಂಡಗೋಡ: ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಲು ಆಗ್ರಹಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪಂಚಮಸಾಲಿ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ರು. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಂಘದ ಕಾರ್ಯಕರ್ತರು, 2ಎ ಮೀಸಲಾತಿಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದ್ದೆವು, ಆ ವೇಳೆ, ಸಿಎಂ ಆಗಿದ್ದ ಯಡಿಯೂರಪ್ಪ ಅವರು 2ಎ ಮೀಸಲಾತಿ ನೀಡಲು ಆರು ತಿಂಗಳು ಸಮಯ ಕೇಳಿದ್ದರು, ಆದ್ರೆ ಈಗ ಯಡಿಯೂರಪ್ಪರ ಸಮಯದ ಅವಧಿ ಮುಗಿದಿದೆ. ಈಗ ನೂತನವಾಗಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ, ಕೂಡಲೇ...
ಮುಂಡಗೋಡಿನಲ್ಲಿ ಸರಳ ವಿಶ್ವಕರ್ಮ ಜಯಂತಿ ಆಚರಣೆ..!
ಮುಂಡಗೋಡ: ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಉತ್ಸವ ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ ಕಾರ್ಯಾಲಯದ ಅಧಿಕಾರಿಗಳು ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳ ವಿಶ್ವಕರ್ಮ ಸಮಾಜದ ಮುಖಂಡರು ಸರಳವಾಗಿ ಆಚರಿಸಿದ್ರು. ಈ ವೇಳೆ ವಿಶ್ವಕರ್ಮ ಸಮಾಜದ ಆರ್.ವಿ. ಬಡಿಗೇರ್, ಮೌನೇಶ್ ಬಡಿಗೇರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ಸೇರಿ ವಿಶ್ವಕರ್ಮ ಸಮಾಜದ ಹಲವು ಮುಖಂಡರು ಭಾಗವಹಿಸಿದ್ದರು.
ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!
ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.
ಅಗಡಿಯಲ್ಲಿ ತಮ್ಮ ನೆಚ್ಚಿನ ಹೋರಿಗೆ ಹುಟ್ಟು ಹಬ್ಬ ಆಚರಿಸಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದಲ್ಲಿ ಗಾಡಾ ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರೋ ಹೋರಿಗೆ ಹುಟ್ಟು ಹಬ್ಬ ಆಚರಿಸಿದ್ರು. ಗ್ರಾಮಸ್ಥರೇಲ್ಲರೂ ಸೇರಿ ರಾಜಾ ಎಂಬ ಹೆಸರಿನ ಹೋರಿಗೆ ವಿಶೇಷ ಅಲಂಕಾರ ಮಾಡಿ, ತಳೀರು ತೋರಣ ಕಟ್ಟಿ, ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡಿದ್ರು. ಅಲ್ಲದೇ ಗ್ರಾಮಸ್ಥರು ತಮ್ಮನೆಚ್ಚಿನ ಹೋರಿಗೆ ವಿಶೇಷ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಮಹಿಳೆಯರು ಆರತಿ ಬೆಳಗಿದರು, ಜಯಘೋಷಗಳೊಂದಿಗೆ ಕುಣಿದು ಕುಪ್ಪಳಿಸಿದ್ರು.
ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಇಂದು, ಗ್ಯಾಸ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವಂತೆ ಮುಂಡಗೋಡ ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಮಣ್ಣಪ್ಪ ಗೌಡ್ರು, ಮಾಜಿ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ರಾಠೋಡ್, ಧರ್ಮರಾಜ ನಡಗೇರಿ, ಎಂ. ಎನ್. ದುಂಡಸಿ, ಅಲಿ ಹಸನ್ ಬೆಂಡಿಗೇರಿ, ಮಲ್ಲಿಕಾರ್ಜುನ್ ಗೌಳಿ, ಜೈನು ಬೆಂಡಿಗೇರಿ, ಅಲ್ಲಾಉದ್ದೀನ್ ಕಮಡೊಳ್ಳಿ,ಪ್ರಶಾಂತ್...