Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!

ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!

ಮುಂಡಗೋಡ: ತಾಲೂಕಿನಲ್ಲಿ ಸದ್ಯ ಮೊಹರಂ ಆಚರಣೆ ಭಕ್ತಿ ಭಾವದಿಂದ ನೆರವೇರುತ್ತಿದೆ. ತಾಲೂಕಿನಾಧ್ಯಂತ ಪಂಜಾಗಳನ್ನು ಪ್ರತಿಷ್ಟಾಪಿಸಲಾಗಿದೆ. ಹೀಗಾಗಿ, ಹುಲಿ ವೇಷಧಾರಿಗಳ ಕುಣಿತವೂ ಎಲ್ಲೆಲ್ಲೂ ಕಂಡು ಬರುತ್ತಿದೆ. ಅದ್ರಂತೆ, ಇಂದು ಮುಂಡಗೋಡ ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತ ಹುಲಿವೇಷಧಾರಿ ಬಂದಿದ್ದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ ಪ್ರಸಿದ್ಧ ತಮಟೆ ಕಲಾವಿದ ಪ್ರತಾಪ್ ಅವರು ತಮಟೆ ಬಾರಿಸಿದ್ರು. ತಮಟೆ ಶಬ್ದಕ್ಕೆ ಹುಲಿ ವೇಷಧಾರಿ ಸಕತ್ ಸ್ಟೆಪ್ ಹಾಕಿದ್ರು‌‌. ಮುಂಡಗೋಡಿನ ಶಿವಾಜಿ ಸರ್ಕಲ್ ಬಳಿ ಹುಲಿಯ ನೃತ್ಯಕ್ಕೆ ಜನರು ಫಿದಾ ಆಗಿ ಚಪ್ಪಾಳೆ...

Post
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!

ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!

ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪಿಸುವಂತೆ ಇಂದು ಮುಂಡಗೋಡಿನ ರಾಯಣ್ಣ ಅಭಿಮಾನಿ ಬಳಗದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ಹಲವು ವರ್ಷಗಳಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಅಂತಾ ನಾಮಕರಣ ಮಾಡಲಾಗಿದೆ. ಆ ಕುರಿತು ಪಟ್ಟಣ ಪಂಚಾಯತಿಯಲ್ಲಿ ದಾಖಲಾಗಿದೆ. ಆದ್ರೆ ತಾಲೂಕಿನ ಸುಮಾರು 50 ಕಿಮಿ ವ್ಯಾಪ್ತಿಯಲ್ಲಿ ಎಲ್ಲಿಯೂ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆಯಾಗಿಲ್ಲ‌. ಹೀಗಾಗಿ, ಪಟ್ಟಣದ ಕಂಬಾರಗಟ್ಟಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ಮುಂದಿನ ಪೀಳಿಗೆಗೆ ರಾಯಣ್ಣನವರ...

Post
ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!

ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!

ಮುಂಡಗೋಡ; ಪಟ್ಟಣದಲ್ಲಿ ರವಿವಾರ 75 ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಜೋರಾಗಿತ್ತು.. ಇಲ್ಲಿನ ಪ್ರತೀ ಗಲ್ಲಿಗಳಲ್ಲೂ ಭಾರತ ಮಾತೆಯ ತ್ರಿವರ್ಣಧ್ವಜ ರಾರಾಜಿಸುತ್ತಿತ್ತು.. ಪಟ್ಟಣದ ಸಂಘಸಂಸ್ಥೆಗಳು ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ರು..ಇನ್ನು ಸ್ವಾತಂತ್ರ ದಿನಾಚರಣೆ ನಿಮಿತ್ತ ಮುಂಡಗೋಡಿನ ಪುಟ್ಟ ಪುಟಾಣಿ ಮಕ್ಕಳು ದೇಶಭಕ್ತಿಗೀತೆಗೆ ಹೆಜ್ಜೆ ಹಾಕಿದ್ದಾರೆ.. ಸ್ವಾತಂತ್ರ ಸಂಭ್ರಮದ ಕ್ಷಣಗಳನ್ನು ವಿನೂತನ ಡ್ಯಾನ್ಸ್ ಮಾಡುವ ಮೂಲಕ ದೇಶಭಕ್ತಿಯ ಕಂಪು ಹರಿಸಿದ್ದಾರೆ.. ಹಾಗಾದ್ರೆ ಆ ಸಕತ್ ಸ್ಟೆಪ್ ಹೇಗಿದೆ ಗೊತ್ತಾ.. ನೀವೂ ನೋಡಿ..

Post
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!

ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು‌. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.

Post
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!

ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!

ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು‌. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.

Post
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾ‌ನ್..!

ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾ‌ನ್..!

ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.

Post
ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!

ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!

ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು...

Post
ಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!

ಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!

ಮುಂಡಗೋಡ: ತಾಲೂಕಿನ ಇಂದೂರು ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರೋ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಿದೆ. ಇಂದೂರು ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

Post
ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?

ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?

ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಿನ್ನೆ ಗುರುವಾರ ನಡೆದಿದ್ದ ಪುಟ್ಟ ಬಾಲಕಿ ಗಟಾರಿನಲ್ಲಿ ಬಿದ್ದು ಒದ್ದಾಡಿದ ಘಟನೆಗೆ ಸಂಬಂಧಿಸಿದಂತೆ ಇಂದು ನಂದಿಕಟ್ಟಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದ್ರೆ ಪಿಡಿಓ ಸಾಹೇಬ್ರು ಮಾತ್ರ ಪಂಚಾಯತಿಗೆ ಬಂದರೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ ತೋರಿದ್ದಾರೆ ಅಂತಾ ಕೆಲವ್ರು ಅಸಮಾಧಾನ ಹೊರ ಹಾಕಿದ್ರು. ಅವೈಜ್ಞಾನಿಕ ಗಟಾರು‌ ನಿರ್ಮಾಣ..! ಇನ್ನು ಗಟಾರಗಳ ಅವ್ಯವಸ್ಥೆ ಕಣ್ಣಾರೆ ಕಂಡ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ತಕ್ಷಣವೇ...

Post
ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!

ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಇವತ್ತು ಭಯಾನಕ ಘಟನೆಯೊಂದು ನಡೆದು ಹೋಗಿದೆ. ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೇ ವರ್ಷದ ಪುಟ್ಟ ಕಂದಮ್ಮ ಕೊಳಚೆ ತುಂಬಿದ್ದ ಗಟಾರಿನಲ್ಲಿ ಬಿದ್ದು ಒದ್ದಾಡಿದೆ‌. ಅದೃಷ್ಟವಶಾತ್ ಹಾಗೆ ಬಿದ್ದ ಪುಟ್ಟ ಮಗುವನ್ನು ತಕ್ಷಣವೇ ಅಜ್ಜಿ ಮೇಲಕ್ಕೆತ್ತಿದ್ದಾರೆ. ಇಲ್ಲವಾಗಿದ್ದರೆ, ಪುಟ್ಟ ಮಗು ಈಗ ನೆನಪಾಗಿ ಉಳಿಯುತ್ತಿತ್ತು ಅಷ್ಟೆ. ಮಗು ಬದುಕಿದ್ದೇ ಪುಣ್ಯ..! ಹೌದು, ನಂದಿಕಟ್ಟಾ ಗ್ರಾಮದ ಮಕ್ಬುಲ್ ಖಾನ್ ಶಾಹಪುರ್ ಎಂಬುವರ, ಒಂದೂವರೇ ವರ್ಷದ ಪುಟ್ಟ ಬಾಲಕಿ ಇವತ್ತು ಮದ್ಯಾಹ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ...

error: Content is protected !!