ಮುಂಡಗೋಡ: ತಾಲೂಕಿನ ಇಂದೂರಿನ ಹೊರವಲಯದ ಚರ್ಚ ಬಳಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಲಾರಿ ಚಾಲಕ, ಚರ್ಚ ಬಳಿ ಇರೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ಸಂಚಾರ ಇದ್ದಾಗಲೇ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಇನ್ನು ಸ್ಥಳಕ್ಕೆ ಮುಂಡಗೋಡ 112 ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯ ಕಾತರಕ್ಕೆ ಆ ಭಾಗದಲ್ಲಿ ವಿದ್ಯುತ್...
Top Stories
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?
ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!
ಈ ಬಾರಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು ಅನ್ನೋದು ನಮ್ಮ ಉದ್ದೇಶ- ಸಿಎಂ ಸಿದ್ಧರಾಮಯ್ಯ
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಮುಂಡಗೋಡ ಪ.ಪಂಚಾಯತ್ ಪೈಪಲೈನ್ ಕಾಮಗಾರಿಯಲ್ಲಿ ಬಾರಾ ಬಾನಗಡಿ..? ದಾಖಲೆಯಲ್ಲಿ ಇದ್ದ ಪೈಪ್, ಸ್ಥಳದಲ್ಲಿ ಇಲ್ಲವೇ ಇಲ್ಲಾರಿ..!
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಆಂದೋಲನದ ಮಾದರಿಯಲ್ಲಿ ಬಗರ್ ಹುಕುಂ ಅರ್ಜಿಗಳ ವಿಲೇವಾರಿ : ಶಿರಸಿಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
ಚೌಡಳ್ಳಿಯ ಹಿರಿಯ ಸಹಕಾರಿ ಧುರೀಣ ವೈ.ಪಿ.ಪಾಟೀಲ್(72) ವಿಧಿವಶ..!
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
Category: ಮುಂಡಗೋಡ ಸುದ್ದಿ
ಇದು ಮುಂಡಗೋಡ ತಾಲೂಕಿನ ಇಂದಿನ ಕೊರೋನಾ ರಿಪೋರ್ಟ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 1 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ತಾಲೂಕಿನಲ್ಲಿ ಒಟ್ಟೂ 23 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 14 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಗುಣಮುಖರಾಗಿಲ್ಲ . ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲೂ ಯಾವುದೇ ಸೋಂಕಿತರು ದಾಖಲಾಗಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಓಣಿಕೇರಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ನೇಣಿಗೆ ಶರಣು..!
ಮುಂಡಗೋಡ;ತಾಲೂಕಿನ ಓಣಿಕೇರಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. 38 ವರ್ಷದ ಗಿರೀಶ್ ಕೃಷ್ಣಮೂರ್ತಿ ಅರ್ಕಸಾಲಿ ಎಂಬುವ ಯುವಕನೇ ನೇಣಿಗೆ ಶರಣಾದವನಾಗಿದ್ದು, ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ. ಎಷ್ಟೇ ಚಿಕಿತ್ಸೆ ನೀಡಿದ್ರೂ ಗುಣಮುಖ ಆಗಿರಲಿಲ್ಲ. ಹೀಗಾಗಿ ಅದನ್ನೇ ಮನಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ ಅಂತಾ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸಾಪುರದಲ್ಲಿ ಸಾಲಬಾಧೆಯಿಂದ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗಂಗಾರಾಮ್ ಸಿಂಗ್ ಶಂಕರಸಿಂಗ್ ರಜಪೂತ (55) ಎಂಬುವವರೇ ಆತ್ಮಹತ್ಯೆಗೆ ಶರಣಾದ ರೈತನಾಗಿದ್ದು, ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
ಇಂದೂರಿನಲ್ಲಿ “ಪರಿಸರ ಜಾಗ್ರತಿ” ಕಾರ್ಯಕ್ರಮ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿಂದು ಪರಿಸರ ಜಾಗ್ರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆಯ ಕುರಿತು ಜಾಗ್ರತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸಿಖಂದರ್, SDMC ಅಧ್ಯಕ್ಷ ಮಂಜುನಾಥ ನಡಗೇರಿ ಸೇರಿದಂತೆ ಹಲವು ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹುನಗುಂದ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ..!
ಮುಂಡಗೋಡ: ತಾಲೂಕಿನ ಹುನಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಕೆಲವು ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಟಿಚ್ ಮೆಟ್ ಆಪ್ ಮೂಲಕ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಲಾಯಿತು. ಸರಕಾರಿ ಶಾಲೆಗಳು ನೀಡುವ ಸವಲತ್ತು, ಸೌಕರ್ಯಗಳ ಕುರಿತು ತಿಳಿಸಿ ಹೇಳುವ ಜೊತೆಗೆ ಪ್ಲೇಕ್ಸ್ ಬೋರ್ಡ ಅನ್ನು ಅನಾವರಣ ಗೊಳಿಸಲಾಯಿತು. ಕೋವಿಡ್-19 ರ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. SDMC ಅಧ್ಯಕ್ಷರು, ಸದಸ್ಯರು, ಪಾಲಕರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು....
ವರದಕ್ಷಿಣೆ ದುರಾಸೆಗೆ ಬಲಿಯಾದ್ಲಾ ಕೊಪ್ಪದ ಗೃಹಿಣಿ..? ಹಾಗಂತ ಕೇಸು ಕೊಟ್ಟವರಾರು..?
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಗೃಹಿಣಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಮೃತ ಸ್ವಾತಿ ಪತಿ ಹಾಗೂ ಅತ್ತೆಯ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬುಧವಾರ ರಾತ್ರಿ ಸ್ವಾತಿ ಮಂಜುನಾಥ ಹೊಸೂರ (26) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ವರದಕ್ಷಿಣೆ ಕಿರುಕುಳವಾ..? ಅಂದಹಾಗೆ, ಆತ್ಮಹತ್ಯೆ ಮಾಡಿಕೊಂಡಿರೋ ಗೃಹಿಣಿ ಸ್ವಾತಿಗೆ ಮೂವರು ಹೆಣ್ಣುಮಕ್ಕಳು ಜನಿಸಿದ್ದಾರೆ. ಹೀಗಾಗಿ, ಬರೀ ಹೆಣ್ಣುಮಕ್ಕಳನ್ನೇ ಹೆತ್ತಿದ್ದಿಯಾ, ಅಲ್ದೆ ಮದುವೆಯಲ್ಲಿ ವರದಕ್ಷಿಣೆ ಕೂಡ ನೀಡಿಲ್ಲ ಅಂತಾ ಪತಿ ಮಂಜುನಾಥ್...
ಚೌಡಳ್ಳಿ ಹುಡುಗರ ಸಾಹಸ, ಕಿರುಚಿತ್ರ ರಚಿಸಿದ್ದೇ ರೋಚಕ..!!
ಮುಂಡಗೋಡ: ಅದೊಂದು ಪುಟ್ಟಗ್ರಾಮ ಆ ಗ್ರಾಮದಲ್ಲಿ ಅನೇಕ ಜನಪದ, ಸಾಂಸ್ಕೃತಿಕ, ನಾಟಕ ಸೇರಿ ಹಲವು ಪ್ರಕಾರಗಳ ಕಲಾವಿಧರಿದ್ದಾರೆ. ಸಾಕಷ್ಟು ಪ್ರತಿಭಾನ್ವಿತ ಮಕ್ಕಳಿದ್ದಾರೆ. ಹಾಗಿರೋ ಚೌಡಳ್ಳಿ ಗ್ರಾಮದಲ್ಲಿ ಈ ಯುವಕರು ಹೊಸ ಸಾಹಸ ಮಾಡಿದ್ದಾರೆ. ಅಪ್ಪಟ ಜವಾರೀ ಕಲಾವಿಧರಾಗಿರೋ ರೈತನ ಮಕ್ಕಳೇ ಕಿರು ಚಿತ್ರ ರಚಿಸಿದ್ದಾರೆ. ಅಚ್ಚರಿಯೆಂದ್ರೆ ಹಾಗೆ ರಚಿಸಿರೋ ಕಿರುಚಿತ್ರದ ಚಿತ್ರೀಕರಣ, ಯಾವುದೇ ತಂತ್ರಜ್ಞಾನದ ಸಹಾಯದಿಂದಲ್ಲ, ಯಾವುದೇ ಡಿಸಿಟಲ್ ಕ್ಯಾಮೆರಾಗಳಿಂದಲ್ಲ, ಬದಲಾಗಿ ತಾವೇ ನಿರ್ಮಿಸಿಕೊಂಡ ಪರಿಕರಗಳಿಂದ.. ಹಾಗಾದ್ರೆ ಹೇಗಿದೆ ಆ ಅನ್ನದಾತನ ಮಕ್ಕಳ ಮೇಕಿಂಗ್ ಕಹಾನಿ..? ಇಲ್ಲಿದೆ...
ಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.