Home ರಾಜ್ಯ

Category: ರಾಜ್ಯ

Post
ಜಗದೀಶ್ ಶೆಟ್ಟರ್ ಸೇರಿ‌ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!

ಜಗದೀಶ್ ಶೆಟ್ಟರ್ ಸೇರಿ‌ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.

Post
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...

Post
ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

 ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...

Post
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!

ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!

ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.

Post
ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!

ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!

ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ‌ ಮಾಡುವ ಸಾಧ್ಯತೆ ಇದೆ. ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.

Post
ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಜ್ ಆಗಿದೆ‌. ಒಟ್ಟೂ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಮೊದಲ ಪಟ್ಟಿಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಯಾವ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ ಇಲ್ಲಿದೆ ನೋಡಿ ಫುಲ್ ಲಿಸ್ಟ್..!

Post
ಶ್ರವಣಬೆಳಗೊಳ ಜೈನ ಮಠದ ಸ್ಚಸ್ತಿಶ್ರೀ ಚಾರುಕೀರ್ತಿ ಭಟ್ಟಾರಕರು ವಿಧಿವಶ..!

ಶ್ರವಣಬೆಳಗೊಳ ಜೈನ ಮಠದ ಸ್ಚಸ್ತಿಶ್ರೀ ಚಾರುಕೀರ್ತಿ ಭಟ್ಟಾರಕರು ವಿಧಿವಶ..!

ಐತಿಹಾಸಿಕ ಶ್ರವಣಬೆಳಗೊಳದ ಜೈನ ಮಠದ ಭಟ್ಟಾರಕರು ವಿಧಿವಶರಾಗಿದ್ದಾರೆ. ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ಹಿನ್ನಲೆಯಲ್ಲಿ, ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಅಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಭಟ್ಟಾರಕ ಶ್ರೀಗಳು ವಿಧಿವಶರಾಗಿದ್ದಾರೆ. ಮೇ 3, 1949ರಲ್ಲಿ ಶ್ರೀಗಳು ಜನಿಸಿದ್ದರು. 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠಾಧಿಪತಿಯಾಗಿ ನೇಮಕವಾಗಿದ್ದರು. ಕರ್ಮ ಯೋಗಿ...

Post
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?

 ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ‌..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...

Post
ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!

ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!

ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ. ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು...

Post
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದೃವನಾರಾಯಣ್ ವಿಧಿವಶ..!

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರುವೆಳೆದಿರೋ ಆರ್. ದ್ರುವನಾರಾಯಣ್ ಕಾಂಗ್ರೆಸ್ ಶಾಸಕರಾಗಿ ಸಂತೇಮರಳ್ಳಿ ಕ್ಷೇತ್ರದಿಂದ ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದರು. ಚಾಮರಾಜನಗರ ಮಾಜಿ ಸಂಸದರಾಗಿದ್ದ ಆರ್.ಧ್ರುವನಾರಾಯಣ್, ಚಾಮರಾಜನಗರ ಜಿಲ್ಲೆ, ಹೆಗ್ಗವಾಡಿಯಲ್ಲಿ 31 ಜುಲೈ 1961ರಲ್ಲಿ ಜನಿಸಿದ್ದರು. ಅವ್ರುಗೆ 61 ವರ್ಷ ವಯಸ್ಸಾಗಿತ್ತು. ಬೆಂಗಳೂರು ಕೃಷಿ ವಿಜ್ಞಾ‌ನ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಕೃಷಿ), ಎಂ.ಎಸ್ಸಿ. (ಕೃಷಿ) ಪದವಿ ಪಡೆದಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರದ ಹಲವು...

error: Content is protected !!