ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Category: ರಾಜ್ಯ
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ ಕೊಟ್ಟಾರು ಹತ್ಯೆ ಕೇಸ್ ನಲ್ಲಿ ಇಬ್ಬರು ಆತೋಪಿಗಳು ಅರೆಸ್ಟ್ ಆಗಿದ್ದಾರೆ. ಝಾಕೀರ್ ಮತ್ತು ಮಹ್ಮದ್ ಶಫೀಕ್ ಎಂಬುವ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಅಂತಾ ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಶಫೀಕ್ ಹಾಗೂ ಸವಣೂರು ನಿವಾಸಿ ಝಾಕೀರ್ ನನ್ನು ಬಂಧಿಸಿರೋ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಬಂಧಿತ ಇಬ್ಬರೂ ಆರೋಪಿಗಳಿಗೆ PPI ಸಂಘಟನೆ ನಂಟು ಇದೆಯಾ...
ಪ್ರವೀಣ್ ಹತ್ಯೆಗೆ ಖಂಡನೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರ “ರಾಜೀನಾಮೆ” ಬಾಣ..!
ವಿಜಯಪುರ: ಬಿಜೆಪಿ ಮುಖಂಡ ಪ್ರವೀಣ್ ಕೊಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಖುದ್ದು ಬಿಜೆಪಿ ಪಕ್ಷದಲ್ಲಿ ತಮ್ಮದೇ ಪಕ್ಷದ ಆಡಳಿತದ ವಿರುದ್ಧ ಕಾರ್ಯಕರ್ತರು ಸಿಡಿದೇಳುತ್ತಿದ್ದಾರೆ. ಜೊತೆಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಪದಾಧಿಕಾರಿಗಳು ತಮ್ಮ ಒಡಲಾಳದ ಆಕ್ರೋಶ ಹೊರಹಾಕುತ್ತಿದ್ದಾರೆ. ಹಿಂಡು ಹಿಂಡು ರಾಜೀನಾಮೆ..! ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾ ಸಮಿತಿ ಹಾಗೂ ಒಂಭತ್ತು ಮಂಡಳಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ...
ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು, ಪ್ರವೀಣ್ ಹತ್ಯೆಗೆ ವ್ಯಾಪಕ ಆಕ್ರೋಶ.!
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಇಡೀ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಖುದ್ದು ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟನೆ ಕಾರ್ಯಕರ್ತರೇ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಾಧ್ಯಂತ ಹಲವು ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ, ಜವಾಬ್ದಾರಿಗಳಿಗೆ ಹಿಂಡು ಹಿಂಡಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ನಡುವೆ ನಾಳೆಯೇ ಮಾನ್ಯ “ಬೊಮ್ಮಾಯಿ ಸರ್ಕಾರ” ಒಂದು ವರ್ಷ ಪೂರೈಸಿದ ಸಂಭ್ರಮೋತ್ಸವ ಆಚರಣೆಯಲ್ಲಿ ಬ್ಯುಸಿಯಾಗಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!
ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾಳೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ವಾಗಲಿದ್ದು, ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್...
ಕಾರವಾರದ ಕದಂಬ ನೌಕಾನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್..!
ಕಾರವಾರ: ಭಾರತೀಯ ನೌಕಾಪಡೆಯು ವಿಶ್ವದಲ್ಲಿ ಅತ್ಯುತ್ತಮವಾದ ಗೌರವ ಹೊಂದಿದೆ. ಅಮೆರಿಕದ ನೌಕಾಪಡೆಯು ಭಾರತೀಯ ನೌಕಾಪಡೆಯೊಂದಿಗೆ ಸಹಯೋಗ ಹೊಂದಲು ಉತ್ಸುಕವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು. ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿ ನೌಕಾ ಸಿಬ್ಬಂದಿಗಳ ಕುಟುಂಬದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತದ ಕಡಲು ನೌಕಾದಳದಿಂದಾಗಿ ಸುರಕ್ಷಿತವಾಗಿದೆ. ದೇಶದ ಗಡಿಗಳು ಸುರಕ್ಷಿತವಾಗಿವೆ. ಇದರಲ್ಲಿ, ದೇಶದ ರಕ್ಷಣೆಯಲ್ಲಿ ತೊಡಗಿರುವ ಮೂರೂ ಪಡೆಗಳ ಕೊಡುಗೆಯಿದೆ. ಹಾಗಾಗಿ ಪ್ರಜೆಗಳಲ್ಲಿ ನಿಮ್ಮೆಲ್ಲರ ಬಗ್ಗೆ ಇರುವ ಗೌರವ ಮತ್ತು ಹೆಮ್ಮೆಯನ್ನು...
ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆ. ಲಕ್ಷ್ಮಣ ಸವದಿ, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ಘೋಷಣೆ ಮಾಡಿದೆ. ಲಿಂಗಾಯತ ಕೋಟಾದಡಿ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ., ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಹಾಗೂ ನಾಯಕ್ ಕೋಟಾದಡಿ ಹೇಮಲತಾ ನಾಯಕ್ ಗೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ.
ಇಂದು ಮತ್ತೆ ಭಾರೀ ಮಳೆಯಾಗುವ ಸಂಭವ, ಎಲ್ಲೇಲ್ಲಿ ಮಳೆಯಾಗತ್ತೆ ಗೊತ್ತಾ..?
ಬೆಂಗಳೂರು: ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇದು ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದ್ರಂತೆ ದಾವಣಗೇರೆಯಲ್ಲಿ ಹೆಚ್ಚು ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕೊಡಗು,ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮುನ್ಸೂಚನೆ ನೀಡಲಾಗಿದೆ.
ಕಮಲ್ ಪಂಥ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ..!
ಬೆಂಗಳೂರು: ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸಿ. ಎಚ್. ಪ್ರತಾಪ್ ರೆಡ್ಡಿ ನೇಮಕಗೊಂಡಿದ್ದಾರೆ. ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ, ಅವರ ಜಾಗಕ್ಕೆ ಕ್ರೈಂ ಮತ್ತು ಟೆಕ್ನಿಕಲ್ ಸೆಲ್‌ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಅವರನ್ನು ಸಿಐಡಿಯ ಎಸ್ಪಿಯಾಗಿ ವರ್ಗಾವಣೆ...