ಮುಂಡಗೋಡ : ಪಟ್ಟಣದಲ್ಲಿ ಇಂದು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ, ವಕೀಲರ ಸಂಘ ಮನವಿಯೊಂದನ್ನ ಅರ್ಪಿಸಿದೆ. ಜನನ-ಮರಣ ನೋಂದಣಿ ಸಂಬಂಧ ರಾಜ್ಯ ಸರ್ಕಾರದ ಅಧಿಸೂಚನೆ ವಾಪಸ್ ಪಡೆದು, ಈ ಹಿಂದಿನಂತೆ ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಜನನ-ಮರಣ ನೋಂದಣಿ ಸಂದರ್ಭದಲ್ಲಿ ವಿಳಂಭ ಅಥವಾ ಬೇರೆ ಯಾವುದೋ ವಿವಾದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ ಅಂತಹ ವ್ಯಕ್ತಿಗಳು ಈ ಹಿಂದೆ, ಜನನ-ಮರಣ ನೋಂದಣಿ ಕಾಯ್ದೆ ಕಲಂ, 13 ರ ಪ್ರಕಾರ ಸ್ಥಳೀಯ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ...
Top Stories
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಮುಂಡಗೋಡ 7 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಅಹ್ವಾನ..!
ಧಾರವಾಡದ ವಿವಿಧೆಡೆ ಭಾರೀ ಮಳೆ: ಸಿಡಿಲಿಗೆ ಓರ್ವ ರೈತ ಬಲಿ..!
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
Category: ಸಂಕ್ಷಿಪ್ತ ಸುದ್ದಿ
ನಂದಿಕಟ್ಟಾದಲ್ಲಿ ಪ್ರವೀಣ್ ಹತ್ಯೆಗೆ ಖಂಡನೆ, ಬಿಜೆಪಿ ಯುವ ಮೋರ್ಚಾದಿಂದ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕೊಟ್ಟಾರು ಸಾವಿಗೆ, ಬಿಜೆಪಿ ಯುವ ಮೋರ್ಚಾ ಘಟಕ ಕಂಬನಿ ಮಿಡಿದಿದೆ. ಹತ್ಯೆಯಾಗಿರೋ ಪ್ರವೀಣ್ ಕೊಟ್ಟಾರು ಭಾವಚಿತ್ರಕ್ಕೆ ಹೂ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸಿದ ಯುವ ಕಾರ್ಯಕರ್ತರು, ಹಂತಕರಿಗೆ ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದ್ದಾರೆ. ಈ ವೇಳೆ ನಂದಿಕಟ್ಟಾ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮುಂಡಗೋಡ ಬಿಜೆಪಿ ಯುವ ಮೋರ್ಚಾದಿಂದ ಪ್ರವೀಣ್ ನೆಟ್ಟಾರು ಗೆ ಶೃದ್ಧಾಂಜಲಿ..!
ಮುಂಡಗೋಡ: ಬಿಜೆಪಿ ಯುವ ಮುಖಂಡ, ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತ ಪಡಿಸಿದೆ. ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಹತ್ಯೆಯಾದ ಪ್ರವೀಣ್ ಕೊಟ್ಟಾರುಯವರಿಗೆ ಶೃದ್ಧಾಂಜಲಿ ಅರ್ಪಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರೋ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಯುವ ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.
ಉಗ್ನಿಕೇರಿಯಲ್ಲಿ ವಿಶಿಷ್ಟವಾಗಿ ಆಚರಣೆಗೊಂಡ ಕಾರ್ಗಿಲ್ ವಿಜಯ್ ದಿವಸ್..!
ಮುಂಡಗೋಡ: ತಾಲೂಕಿನ ಉಗ್ನಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಶ್ರೀರಾಮ ಸೇನೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಇರುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇರುವ ನೀರಿನ ಟ್ಯಾಂಕನ್ನು ಸ್ವಚ್ಛಗೊಳಿಸಲಾಯಿತು. ಹಲವು ದಿನಗಳಿಂದ ಸ್ವಚ್ಚತೆ ಮಾಡದೇ ಇದ್ದಿದ್ದ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚಗೊಳಿಸಿದ ಕಾರ್ಯಕರ್ತರು, ಟ್ಯಾಂಕ್ ಸುತ್ತಮುತ್ತಲಿನ ಗಿಡಗಂಟಿಗಳನ್ನು ಹಾಗೂ ಕೊಳಚೆಯನ್ನು ಸ್ವಚ್ಚಗೊಳಿಸಿದ್ರು. ಈ ಮೂಲಕ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿದ್ರು.
ಮುಂಡಗೋಡಿನಲ್ಲಿ ಹಿರಿಯ ಸಾಧಕರಿಗೆ ಸಚಿವರಿಂದ ಸನ್ಮಾನ..!
ಮುಂಡಗೋಡ: ಪಟ್ಟಣದ ಎಲ್.ವಿ.ಕೆ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ” ವಿಶ್ವ ಜನಸಂಖ್ಯಾ ದಿನಾಚರಣೆ ಅಭಿಯಾನ ” ಕಾರ್ಯಕ್ರಮದಲ್ಲಿ ಹುನಗುಂದದ ಹಿರಿಯ ಶುಶ್ರೂಕಿ ಶಾಲಿನಿ ನಾಯ್ಕ್ ಸೇರಿದಂತೆ ಹಲವು ಸಾಧಕರಿಗೆ ಸನ್ಮಾನಿಸಲಾಯಿತು. ಸಚಿವ ಶಿವರಾಮ್ ಹೆಬ್ಬಾರ್, ಹಲವು ಹಿರಿಯ ಶುಶ್ರೂಕಿಯರು ಹಾಗೂ ಹಿರಿಯ ಆಶಾ ಕಾರ್ಯಕರ್ತೆಯರಿಗೆ ಶಾಲು ಹೊದಿಸಿ ಸನ್ಮಾನಿಸಿದ್ರು. ಇದ್ರ ಜೊತೆ ತಾಲೂಕಿನ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸಚಿವರು ಸನ್ಮಾನಿಸಿದ್ರು. ಈ ವೇಳೆ ಹಲವು ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
ಸಂಘದ ಪ್ರಚಾರಕ ಸತೀಶ್ ಕಟ್ಟಿಯವರಿಗೆ ಶೃದ್ಧಾಂಜಲಿ ಕಾರ್ಯಕ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಭಜರಂಗದಳ ಹಾಗೂ ಹಿಂದೂಪರ ಸಂಘಟನೆಗಳಿಂದ ದಿ. ಸತೀಶ್ ಕಟ್ಟಿವರಿಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸೋಮವಾರ ನಿಧನರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕ ಸತೀಶ್ ಕಟ್ಟಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕಾ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚಿ ಶೃದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಭಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರೊಂದಿಗೆ ಭಕ್ತಿಪೂರ್ವಕವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.
ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ..!
ಮುಂಡಗೋಡ: ತಾಲೂಕಿನ ಅಗಡಿ ಬಳಿ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ, ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆದ್ರೆ, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹಳಿಯಾಳ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್, ರಸ್ತೆಗಳ ಗುಂಡಿಗಳಲ್ಲಿ ನಿಯಂತ್ರಣ ತಪ್ಪಿ ಬಿದ್ದಿತ್ತು ಎನ್ನಲಾಗಿದೆ. ಹೀಗಾಗಿ, ರಸ್ತೆಗಳ ಅವ್ಯವಸ್ಥೆಗೆ ಜನರು ಹಿಡಿಶಾಪ ಹಾಕುವಂತಾಗಿದೆ. ಅಂದಹಾಗೆ, ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಕಬ್ಬು ಸಾಗಿಸುತ್ತಿವೆ. ಈ ವೇಳೆ ರಸ್ತೆಗಳ ಗುಂಡಿಗಳಿಂದ ಇನ್ನಿಲ್ಲದ ಕಿರಿಕಿರಿಯಾಗುತ್ತಿದೆ. ಸಂಬಂದಪಟ್ಟ ಇಲಾಖೆ ಈ ಕಡೆ...
ಇಂದೂರಿನಲ್ಲಿ “ಪುನೀತ್” ಪುಣ್ಯಸ್ಮರಣೆ, ಕ್ಯಾಂಡಲ್ ಹಚ್ಚಿ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ರವರ 11 ದಿನದ ಪುಣ್ಯತಿಥಿಯ ನಿಮಿತ್ತ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಸೋಮವಾರ ಸಂಜೆ ಇಲ್ಲಿನ ಮುಖ್ಯ ಸರ್ಕಲ್ ನಲ್ಲಿ ಪುನೀತ್ ರಾಜಕುಮಾರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನಂತರ ಮೇಣದ ಬತ್ತಿ ಹಚ್ಚಿ ಶೃದ್ಧಾಂಜಲಿ ಅರ್ಪಿಸಲಾಯಿತು. ಪುನೀತ್ ರಾಜಕುಮಾರ್ ಮತ್ತೆ ಹುಟ್ಟಿ ಬನ್ನಿ ಅಂತಾ ಘೋಷಣೆ ಕೂಗಿದ ಅಭಿಮಾನಿಗಳು ಪುನೀತ್ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದ್ರು.
ಸಿದ್ದನಕೊಪ್ಪದ ಕಬಡ್ಡಿ ಪಂದ್ಯಾವಳಿಯಲ್ಲಿ ಅತಿಥಿಗಳೇ ಕಣದಲ್ಲಿ ಘರ್ಜನೆ..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಉದ್ಘಾಟನೆಗೆ ಬಂದಿದ್ದ ಅತಿಥಿಗಳು ಕಬಡ್ಡಿ ಆಟ ಆಡಿ ಸಂಭ್ರಮಿಸಿದ್ರು. ಎರಡು ತಂಡಗಳಾಗಿ ಕಣಕ್ಕಿಳಿದ ಅತಿಥಿ ಮಹೋದಯರು ಕಬಡ್ಡಿ ಆಟದ ಮಜಲುಗಳನ್ನು ಪ್ರದರ್ಶಿಸಿದ್ರು. ಮಳಗಿಯ ಸಂತೋಷ ಶೇಟ್ ರಾಯ್ಕರ್,ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಕಬಡ್ಡಿ ಆಟದಲ್ಲಿ ಪಾಲ್ಗೊಂಡರು. ಇನ್ನು ನಿನ್ನೆಯಿಂದಲೂ ಸಿದ್ದನಕೊಪ್ಪ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿವೆ.
- 1
- 2