Home BIG BREAKING

Category: BIG BREAKING

Post
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.‌!

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...

Post
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!

ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ....

Post
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ

ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ

 ಧಾರವಾಡ: ಹಣ ಕೊಟ್ಟು ವರ್ಗಾವಣೆ ಮಾಡಿಕೊಂಡು ಬಂದ ಪೊಲೀಸ್ ಅಧಿಕಾರಿಗಳು ಕಳ್ಳ, ಕಾಕರಿಂದ, ಬಡ್ಡಿ ದಂಧೆಕೋರರಿಂದ ಹಾಗೂ ವೇಶ್ಯಾವಾಟಿಕೆ ಮಾಡಿಸುವವರಿಂದಲೂ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಕೃತ್ಯಗಳು ಆಗಲು ಎರಡು ಕಾರಣಗಳಿವೆ. ಒಬ್ಬರು ಹುಟ್ಟುತ್ತಲೇ ಕ್ರೈಂ ಮಾಡಿಕೊಂಡು ಬಂದವರು ಮತ್ತೊಬ್ಬರು ಬಡ್ಡಿ ದಂಧೆಕೋರರಿಂದ ಕ್ರೈಂಗಳು ಆಗುತ್ತಿವೆ. ಬಡ್ಡಿ ದಂಧೆ ಮಾಡುವವರು ಫೈನಾನ್ಸ್ ಕಂಪೆನಿಯಿಂದ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಫೈನಾನ್ಸ್ ಕಂಪೆನಿಗಳು...

Post
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!

ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!

ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ಭರ್ಜರಿ ಯುದ್ಧ ಸಾರಿದ್ದಾರೆ. ಪರಿಣಾಮ 25 ಮೀಟರ್ ಬಡ್ಡಿ ದಂಧೆಕೋರರನ್ನು ಹೆಡೆಮುರಿ ಕಟ್ಟಿದ್ದಾರೆ. ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರಲ್ಲದೇ ನೆಮ್ಮದಿ ನಿಟ್ಟುಸಿರು ಬಿಡುವಂತೆ ಮಾಡುವಂತೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಮುಂದಾಗಿ ಹುಬ್ಬಳ್ಳಿ,...

Post
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?

ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ‌. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...

Post
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!

ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!

ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಆದ್ರೆ, ಅಧ್ಯಕ್ಷರಾದ ಮೊದಲ ದಿನವೇ ಶಾಕ್ ಎದುರಾಗಿದೆ. ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ, ಮಾನ್ಯ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಅದರ ವಿರುದ್ಧ ನಾಲ್ವರು ಪಟ್ಟಣ ಪಂಚಾಯತಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು‌. ಹೀಗಾಗಿ, ವಿಚಾರಣೆ ನಡಸಿರೊ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಹೀಗಾಗಿ, ಅಧ್ಯಕ್ಷ ಪದವಿಗೇರಿದ್ರೂ ಜಯಸುಧಾ ಭೋವಿ ಮೇಡಂ ಸದ್ಯ ಕೋರ್ಟ್...

Post
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!

ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!

ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಪದವಿ ಗಿಟ್ಟಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ್ ನಿರಾಯಾಸವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಮುಂಡಗೋಡ ಪಟ್ಟಣ ಪಂಚಾಯತಿ ಕಾಂಗ್ರೆಸ್ ನೆರಳಲ್ಲಿ, ಶಿವರಾಮ್ ಹೆಬ್ಬಾರ್ ಬೆಂಬಲಿಗರ ಪಾಲಾಗಿದೆ. ಅಸಲು, ಅಧ್ಯಕ್ಷ ಸ್ಥಾನ ಜಯಸುಧಾ ಭೋವಿಯವರಿಗೆ ದಕ್ಕಿದ್ದೇ ರೋಚಕ ಎಂಬಂತಾಗಿದೆ. ಮೊನ್ನೆ ಯಿಂದಲೂ ಆಯ್ಕೆ ಕಸರತ್ತು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿತ್ತು. ಇವತ್ತು ಬೆಳಗಿನವರೆಗೂ ಕಸುಮಾ ನಾಗಭೂಷಣ ಹಾವಣಗಿಯವ್ರೇ ಕೈ ಪಡೆಯ...

Post
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!

ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!

 ಮುಂಡಗೋಡ ಹೊರ ವಲಯದ ಮಹಾಲೆ ಮಿಲ್ ಹತ್ತಿರ PWD ಅಧಿಕಾರಿಗಳು ಬಂದಿಳಿದಿದ್ದಾರೆ. ನಿನ್ನೆಯಷ್ಟೇ ರಸ್ತೆಯಲ್ಲಿ ಬಾಯ್ತೆರೆದಿರೋ ಯಮರೂಪಿ ಗುಂಡಿಗಳ ಬಗ್ಗೆ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರತ್ಯಕ್ಷ ವರದಿ ಬಿತ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗ್ತಿದೆ. ವಾಹನ ಸವಾರರಿಗೆ ತಾತ್ಕಾಲಿಕವಾಗಿ ಕೊಂಚ ಸಮಾಧಾನ ಸಿಕ್ಕಂತಾಗಿದೆ. ಅಂದಹಾಗೆ, ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..! ನಿಜ, ಇದು ನಿನ್ನೆ ಮೊನ್ನೆಯ ಸಮಸ್ಯೆ ಅಲ್ಲ. ಪ್ರತೀ ವರ್ಷದ ಮಳೆಗಾಲ ಬಂತಂದ್ರೆ ಸಾಕು ಈ ರಸ್ತೆಯಲ್ಲಿ ಜಸ್ಟ್ ನಡೆದಾಡಲೂ...

Post
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!

ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!

ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ‌. ಮೃತರು...

Post
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?

ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...

error: Content is protected !!