Home BIG BREAKING

Category: BIG BREAKING

Post
ನಾಳೆ ಹಾವೇರಿಗೆ ಸಿಎಂ ಸಿದ್ದರಾಮಯ್ಯ, ಪ್ರಗತಿ ಪರಿಶೀಲನಾ ಸಭೆ ನಡೆಸಲಿರೋ ಸಿಎಂ..!

ನಾಳೆ ಹಾವೇರಿಗೆ ಸಿಎಂ ಸಿದ್ದರಾಮಯ್ಯ, ಪ್ರಗತಿ ಪರಿಶೀಲನಾ ಸಭೆ ನಡೆಸಲಿರೋ ಸಿಎಂ..!

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ ಹಾಗೂ ಕೆಲವು ಕಡೆ ಹಾನಿಯಾದ ಹಿನ್ನಲೆಯಲ್ಲಿ, ನಾಳೆ ಮೊದಲ ಬಾರಿಗೆ ಏಲಕ್ಕಿ ನಾಡಿಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಕೃಷಿ,ಆರೋಗ್ಯ,ಆಹಾರ, ಮಳೆ-ಬೆಳೆ ಹಾನಿ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಹೀಗಾಗಿ, ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ರಿಂದ ಪೂರ್ವ ಭಾವಿ ಸಭೆ ನಡೆಯಿತು....

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳೊಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಕರೆ ನೀಡಲಾಗಿದೆ.

Post
ಲಂಚ ಪಡೆಯುತ್ತಿದ್ದ ವೇಳೆ, ಹಾವೇರಿ DDPI ಮೇಲೆ ಲೋಕಾಯುಕ್ತ ದಾಳಿ, DDPI ಅಂದಾನೆಪ್ಪ ಸೇರಿ ಇಬ್ಬರು ವಶಕ್ಕೆ..!

ಲಂಚ ಪಡೆಯುತ್ತಿದ್ದ ವೇಳೆ, ಹಾವೇರಿ DDPI ಮೇಲೆ ಲೋಕಾಯುಕ್ತ ದಾಳಿ, DDPI ಅಂದಾನೆಪ್ಪ ಸೇರಿ ಇಬ್ಬರು ವಶಕ್ಕೆ..!

ಹಾವೇರಿ: ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಹಾಗೂ ಕೇಸ್ ವರ್ಕರ್ ದತ್ತಾತ್ರೆಯ್ ಕುಂಟೆಯವರನ್ನ ಲೋಕಾ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ, ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿದ್ದರು. ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು. ಅದಕ್ಕಾಗಿ ಡಿಡಿಪಿಐ 7 ಸಾವಿರ...

Post
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!

ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!

ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...

Post
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?

ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?

ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು...

Post
ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ,  ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!

ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ, ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!

ಮುಂಡಗೋಡ: ಪಟ್ಟಣದಲ್ಲಿ ಶನಿವಾರ ಮದ್ಯಾಹ್ನ ನಡೆದಿದ್ದ ದರೋಡೆ ಕೇಸ್ ಕೊನೆಗೂ ಬಟಾಬಯಲಾಗಿದೆ. ಮುಂಡಗೋಡಿನ ಯುವ ಪೊಲೀಸ್ ಪಡೆ ಘಟನೆ ನಡೆದ ಗಳಿಗೆಯಿಂದಲೇ ಕಾರ್ಯಾಚರಣೆಗಿಳಿದು ಇಬ್ಬರು ಅಸಲೀ ಆರೋಪಿಗಳನ್ನು ಎಳೆದು ತಂದಿದ್ದಾರೆ. ಇವ್ರೇ ಆರೋಪಿಗಳು..! ಅಂದಹಾಗೆ, ಶಿಕ್ಷಕಿಯ ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದ ಅಸಲೀ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನ ನಿಂಬೆಹಣ್ಣಿನ ವ್ಯಾಪಾರಿ ಅಫ್ಜಲ್ ಖಾದರಗೌಸ್ ಗವಾಲಿ(31), ಆಟೋ ಚಾಲಕ ದಾದಾಪೀರ ಅಲಿಯಾಸ್ ಖಲಂದರ್ ಮಹಮ್ಮದ್ ಹನೀಪ್ ಮಿರ್ಜಿ(23) ಎಂಬುವ ಇಬ್ಬರು ಆರೋಪಿಗಳನ್ನು ಎಳೆದು...

Post
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?

ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...

Post
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?

ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...

Post
ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!

ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ (Coastal Karnataka) ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ (Heay Rain) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ....

Post
ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!

ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ‌. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.

error: Content is protected !!