ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
Category: BIG BREAKING
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ 4×100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲಿಂದಲೇ, ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಸದ್ಯ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿರೊ ಎನ್.ಎಸ್.ಸಿಮಿ, ಹುರುಪಿನಿಂದಲೇ ಭಾರತ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ....
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ ನೆರವಿಗೆ ಬಂದಿದ್ದಾರೆ....
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ ಬರೋಬ್ಬರಿ 3 ಕೊಲೆಗಳಾಗಿದೆ. ಇಡೀ ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ...
ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಬೀಸಿದ್ದ ಇಬ್ಬರು ಪಿಎಸ್ಐಗಳ ವರ್ಗಾವಣೆ..!
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಗೆ ನೂತನ ಪಿಎಸೈ ಆಗಿ ಕುಂದಾಪುರ ಠಾಣೆಯ ಸುಹಾಸ್ ಹಾಗೂ ವಿಟ್ಲ ಠಾಣಾ ಪಿಎಸ್‌ಐ ಆಗಿದ್ದ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸೈಗಳಿಗೆ ಜಾಗ...
ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಠಿಕಾಣಿ ಹೂಡಿದೆಯಾ..? ಇಂತಹದ್ದೊಂದು ಅನುಮಾನ ಈ ಭಾಗದ ರೈತರಿಗೆ ನಿದ್ದೆಗೆಡಿಸಿದೆ. ನಿನ್ನೆ ರಾತ್ರಿ ಸನವಳ್ಳಿ ಭಾಗದ ಕಾಡಂಚಿನ ಗದ್ದೆಗಳಲ್ಲಿ ಕಾಡಾನೆಗಳು ಓಡಾಡಿ ಹೋಗಿರೋ ಕುರುಹುಗಳು ಸಿಕ್ಕಿವೆ. ಸನವಳ್ಳಿಯ ಫಕ್ಕೀರಪ್ಪ ಬೋಕಿಯವರ್, ಪಕ್ಕಿರೇಶ್ ಕೆರಿಹೊಲದವರ, ರಮೇಶ್ ಅರಶೀಣಗೇರಿಯವರ ನಾಟಿ ಮಾಡಿರೋ ಬತ್ತದ ಗದ್ದೆಗಳಲ್ಲಿ, ಗೋವಿನಜೋಳದ ಗದ್ದೆಗಳಲ್ಲಿ ಆನೆಗಳು ನಡೆದಾಡಿರೋ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಇನ್ನು ಅಡಿಕೆ ತೋಟದಲ್ಲಿ ನುಗ್ಗಿರೋ ಆನೆಗಳು ಕೆಲವು ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ. ಹೀಗಾಗಿ...
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...
ನಂದಿಕಟ್ಟಾ ಗ್ರಾಮದಲ್ಲಿ ಬಾಲಕನಿಗೆ ಕಚ್ಚಿದ ಉರಿಮಂಡಲ ಹಾವು, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 16 ವರ್ಷದ ಬಾಲಕನಿಗೆ ಉರಿಮಂಡಲ ಹಾವು ಕಚ್ಚಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಿಕಟ್ಟಾ ಗ್ರಾಮದಲ್ಲಿ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಕಟ್ಟಿಗೆ ಮೇಲೆ ಕಾಲಿಟ್ಟ ಬಾಲಕ ನಂದನ್ ರವಿ ತೇರಗಾಂವ್(16) ಎಂಬುವವನಿಗೆ ಕಟ್ಟಿಗೆಯಡಿ ಇದ್ದ ಹಾವು ಕಾಲಿಗೆ ಕಚ್ಚಿದೆ. ತಕ್ಷಣವೇ ಬಾಲಕನನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿಂದ ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ ಅಂತಾ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ....