Home BIG BREAKING

Category: BIG BREAKING

Post
ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಇಂದೂರು ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರ್, ನಾಲ್ವರಿಗೆ ಗಾಯ, ಆಸ್ಪತ್ರೆಗೆ ದಾಖಲು..!

 ಮುಂಡಗೋಡ: ಇಂದೂರು ಕೊಪ್ಪ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಹಳೆಯರೂ ಸೇರಿ ನಾಲ್ವರಿಗೆ ಗಾಯವಾಗಿದೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಕಾರ್ ನಂ. KA-31-N-5760 ನಂಬರಿನ ಕಾರ್ ವೇಗವಾಗಿ ಬಂದಿದೆ. ಅತಿವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ, ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುತ್ತಿತ್ತು. ಅದ್ರೆ ಅದೃಷ್ಟವಶಾತ್ ಬೈಕ್ ಗೆ ಡಿಕ್ಕಿ ಹೊಡೆದಿಲ್ಲ. ಬದಲಾಗಿ ವೇಗವಾಗಿ ಬಂದು ಬೃಹತ್ ಆಲದ ಮರಕ್ಕೆ...

Post
ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!

ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!

 ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆಯಲ್ಲಿ ನಿನ್ನೆ ನಡೆದಿದ್ದ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕಿಮ್ಸ್ ನಲ್ಲಿ ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಸಾವು ಕಂಡಿದ್ದಾರೆ. ಗೌರಮ್ಮ ಹಾಗೂ ಮಾಲೇಶ್ ಮೃತ ದುರ್ದೈವಿಗಳಾಗಿದ್ದು, ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಒಟ್ಟು ಮೂವರು ಸಾವನ್ನಪ್ಪಿರೋದಾಗಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. ಇನ್ನುಳಿದ ಐವರು ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ...

Post
ಹುಬ್ಬಳ್ಳಿಯಲ್ಲಿ ಫ್ಯಾಕ್ಟರಿಗೆ ಬೆಂಕಿ, 8 ಜನರಿಗೆ ಗಂಭೀರ ಗಾಯ, ನಾಲ್ವರು ಸಜೀವ ದಹನವಾದ್ರಾ..?

ಹುಬ್ಬಳ್ಳಿಯಲ್ಲಿ ಫ್ಯಾಕ್ಟರಿಗೆ ಬೆಂಕಿ, 8 ಜನರಿಗೆ ಗಂಭೀರ ಗಾಯ, ನಾಲ್ವರು ಸಜೀವ ದಹನವಾದ್ರಾ..?

  ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾರಿಹಾಳದ ಕೈಗಾರಿಕಾ ಪ್ರದೇಶದಲ್ಲಿರೋ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುವ ಫ್ಯಾಕ್ಟರಿಗೆ ಬೆಂಕಿ ಬಿದ್ದಿದ್ದು ಬರೋಬ್ಬರಿ 8 ಜನರಿಗೆ ಗಂಭೀರ ಗಾಯವಾಗಿದೆ. ಇನ್ನೂ ನಾಲ್ವರು ಫ್ಯಾಕ್ಟರಿ ಒಳಗಡೆ ಸಿಲುಕಿ ಸಜೀವ ದಹನವಾಗಿರೋ ಅನುಮಾನವಿದೆ. ಬರ್ಥ ಡೇ ಪಾರ್ಟಿಯಲ್ಲಿ ಬಳಸುವ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುವ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಕಳೆದ ಒಂದು ಗಂಟೆಯ ಹಿಂದೆ ಘಟನೆ ನಡೆದಿದ್ದು, ಪ್ರತೀಕ್ಷಣವೂ ಸ್ಪೋಟದ ಶಬ್ದ ಕೇಳಿಸುತ್ತಿದೆ. ಬೆಂಕಿಯ ಕಡಿಮೆ ನ್ನಾಲಿಗೆ ಹರಡುತ್ತಿದೆ‌. ಹೀಗಾಗಿ, ಅಗ್ನಿಶಾಮಕ...

Post
ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!

ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!

ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ಹಾವು ಏಣಿ ಆಟ ಮುಂದುವರೆದಿದೆ. ಅಧ್ಯಕ್ಷ ಸುನಿಲ್ ವಾಗು ಸಳಕೆ ಜುಲೈ 16 ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ‌. ಈ ಮೂಲಕ ಮತ್ತೊಂದು ಆಟ ಶುರುವಿಟ್ಟು ಸೆಡ್ಡು ಹೊಡೆದಿದ್ದಾರೆ. ಮದ್ಯಂತರ ಆದೇಶ..! ಅಂದಹಾಗೆ, ನಾಗನೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ ಕೆಲವು ಸದಸ್ಯರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಸಹಾಯಕ್ ಆಯುಕ್ತರು ಜುಲೈ 25...

Post
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!

ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!

ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...

Post
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!

ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!

ಮುಂಡಗೋಡ: ತಾಲೂಕಿನ ಇ‌ಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ‌. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾ‌ನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಇಂದೂರು ಪಂಚಾಯತಿಯಲ್ಲಿ ಪಕ್ಷಾಂತರ, ಗ್ರಾಪಂ ಸದಸ್ಯ ರಾಜೂ ಹರಿಜನ್ ಬಿಜೆಪಿ ಸೇರ್ಪಡೆ..!

ಇಂದೂರು ಪಂಚಾಯತಿಯಲ್ಲಿ ಪಕ್ಷಾಂತರ, ಗ್ರಾಪಂ ಸದಸ್ಯ ರಾಜೂ ಹರಿಜನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ‌ ಪಂಚಾಯತಿ ಸದಸ್ಯ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯ ರಾಜೂ ಫಕ್ಕೀರವ್ವ ಹರಿಜನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದ್ರೊಂದಿಗೆ, ಗ್ರಾಮ ಪಂಚಾಯತಿ ಮಟ್ಟದ ರಾಜಕೀಯ ಮೇಲಾಟ ಮತ್ತೊಂದು ಮಗ್ಗಲಿಗೆ ಹೊರಳಿದೆ. ಅಧ್ಯಕ್ಷರ ಬದಲಾವಣೆ ಎಫೆಕ್ಟ್..? ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಅನ್ನಪೂರ್ಣ ಬೆಣ್ಣಿ ಮೇಡಂ ಒಪ್ಪಂದದಂತೆ ತಮ್ಮ ಪದವಿಗೆ ರಾಜೀನಾಮೆ ನೀಡಲು ಕೊಂಚ ತಡ ಮಾಡಿದ್ರು. ಹೀಗಾಗಿ, ತಮ್ಮದೇ ಪಕ್ಷದ ಸದಸ್ಯರಲ್ಲಿ ಸಾಕಷ್ಟು ತಳಮಳಕ್ಕೆ...

Post
ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!

ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!

 ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ‌. ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿ‌ಮಾಡುತ್ತಿದ್ದಾರೆ.

Post
ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!

ಉಕ್ಕಿ ಹರಿದ ಅಘನಾಶಿನಿ ಕುಮಟಾ ತಾಲೂಕಿನಲ್ಲಿ ಪ್ರವಾಹ, 70 ಕುಟುಂಬಗಳ ಸ್ಥಳಾಂತರ..!

 ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಅಬ್ಬರದ ಮಳೆಗೆ ಕುಮಟಾ ತಾಲೂಕಿನ ಅಘನಾಶಿನಿ ನದಿ ತುಂಬಿ ಹರಿಯುತ್ತಿರುವುದರಿಂದ ಕೋನಳ್ಳಿ, ಗುಡ್ನಕಟ್ಟಾ ಮತ್ತು ಮೂರೂರಿನಲ್ಲಿ ನೆರೆ ಸೃಷ್ಟಿಯಾಗಿದೆ. ಈ ಭಾಗದ 70 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ನದಿ ಇಕ್ಕೆಲಗಳಲ್ಲಿರುವ ಇನ್ನಷ್ಟು ಗ್ರಾಮಗಳಿಗೆ ನೆರೆ ಭೀತಿ ಎದುರಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಕುಮಟಾ ತಾಲೂಕಿನ ಅಘನಾಶಿನಿ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಅಪಾಯದ ಮಟ್ಟದಲ್ಲೇ ಹರಿಯಲಾರಂಭಿಸಿದೆ. ಇನ್ನು ಹೊನ್ನಾವರ ತಾಲೂಕಿನ ಗುಂಡಬಾಳ , ಹಡಿನಬಾಳ , ಸಾಲಕೋಡು ಭಾಗದಲ್ಲಿ...

error: Content is protected !!