ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದೆ. ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ, ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ...
Top Stories
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
Category: BIG BREAKING
ಮುಂದುವರೆದ ರಾಜೀನಾಮೆ ಪರ್ವ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಇದ್ರೊಂದಿಗೆ, ಇನ್ನೇನು ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ರೆಡಿ ಮಾಡಿಕೊಂಡಿದ್ದ ಸದಸ್ಯರಿಗೆ ಅಧ್ಯಕ್ಷರ ರಾಜೀನಾಮೆಯಿಂದ ಬೇಗುದಿ ತಣ್ಣಗಾದಂತಾಗಿದೆ. ಬಿಜೆಪಿ ತಾಲೂಕಾ ಮುಖಂಡರ ಹಾಗೂ ಸಚಿವ ಶಿವರಾಮ ಹೆಬ್ಬಾರ ಅವರ ಮಾತಿಗೆ ಒಪ್ಪಿ, ತಮ್ಮ ಸ್ವ ಇಚ್ಛೆಯಿಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸುನೀಲ್ ವಾಗು ಸಳಕೆ ಅವರು ಶನಿವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿ ಆರ್. ದೇವರಾಜ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಈ...
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ, ಕೊನೆಗೂ ಬಗೆಹರಿದ ಗೊಂದಲ..!
ಮುಂಡಗೋಡ: ತಾಲೂಕಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ವಿಚಾರ ಕೊನೆಗೂ ಬಗೆ ಹರಿದಂತಾಗಿದೆ. ಕೊಟ್ಟ ಮಾತಿನಂತೆ ಇಂದು ಅಧ್ಯಕ್ಷ ಸ್ಥಾನಕ್ಕೆ ಅನ್ನಪೂರ್ಣ ಬೆಣ್ಣಿ ರಾಜೀನಾಮೆ ನೀಡಿದ್ದಾರೆ. ಅದ್ರಂತೆ ಉಪಾಧ್ಯಕ್ಷ ಸಿಖಂದರ್ ಬಂಕಾಪುರ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಅಧ್ಯಕ್ಷ, ಉಪಾಧ್ಯಕ್ಷರು ಪಕ್ಷದ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ಕುರಿತು ಸಾಕಷ್ಟು ಚರ್ಚೆಗಳಾಗಿದ್ದವು. ಸಾಕಷ್ಟು ಬಾರಿ ಸಭೆಗಳು ನಡೆದಿದ್ದವು. ಒಪ್ಪಂದದಂತೆ...
ಉತ್ತರ ಕನ್ನಡದ ಮಳೆಹಾನಿ ವೀಕ್ಷಣೆ ಪ್ರವಾಸ ರದ್ದುಗೊಳಿಸಿದ್ರಾ ಸಿಎಂ..? ಉಡುಪಿಯಿಂದಲೇ ಇಂದು ವಾಪಸ್..?
ಕಾರವಾರ: ಮಳೆಹಾನಿ ಪರಿಶೀಲನೆಗಾಗಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಸದ್ಯ ಉಡುಪಿ ಜಿಲ್ಲೆಯಲ್ಲಿದ್ದು, ಈ ಮಧ್ಯೆ ಭಟ್ಕಳ ಪ್ರವಾಸ ರದ್ದುಗೊಳಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಾರಣಾಂತರಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರವಾಸವನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಸ್ತೆ ಮಾರ್ಗವಾಗಿ ಓಡಾಡುವುದು ಕಷ್ಟ ಒಂದು ಸ್ಥಳಕ್ಕಾಗಿ ಅಷ್ಟು ದೂರ ಪ್ರವಾಸ ಬೇಡ, ಅಲ್ಲಿನ ಮಳೆಹಾನಿ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ಇಡೀ...
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!
ಬೆಂಗಳೂರು: ರಾಜ್ಯದಲ್ಲಿನ ಬಹುತೇಕ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಂಡಿದೆ. ನೇಮಕಾತಿ ರದ್ದುಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಅಚ್ಚರಿಯೆಂಬಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಸೇಫ್ ಆಗಿದ್ದಾರೆ. 3 ವರ್ಷದಿಂದ..! ಕಳೆದ ಮೂರು ವರ್ಷಗಳಿಂದ ಅಂದ್ರೆ, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದ, ವಿ.ಎಸ್. ಪಾಟೀಲ್ ರಿಗೆ ಈ ಬಾರಿ ಕೋಕ್ ನೀಡಲಾಗತ್ತೆ ಅನ್ನೊ ಮಾತುಗಳಿದ್ದವು. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ರದ್ದುಗೊಳಿಸಿರೋ ಪಟ್ಟಿಯಲ್ಲಿ ವಿ.ಎಸ್.ಪಾಟೀಲರ ಹೆಸರು ಇಲ್ಲ....
ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!
ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ...
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!
ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...
ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!
ಕುಮಟಾ: ಮಹಾತಾಯಿಯೊಬ್ರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಗೀತಾ ಪಟಗಾರ ಎಂಬುವ ಮಹಿಳೆಯೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವಳಾಗಿದ್ದು, ಮದುವೆಯಾಗಿ 11ವರ್ಷದ ಬಳಿಕ ಎರಡು ಗಂಡು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಮೂರು ಮಕ್ಕಳು ಆರೋಗ್ಯವಾಗಿವೆ.
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?
ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6 ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...