ಕಾರವಾರ- ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅರ್ಭಟ ಜೋರಾಗಿದೆ..ನಿನ್ನೆ ರಾತ್ರಿಯಿಂದ ಎಡಬಿಡದೆ ಗಾಳಿ ಮಳೆ ಸುರಿಯುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ತತ್ತರಿಸಿದೆ..
ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಕಗ್ಗತ್ತಲಲ್ಲಿ ಮುಳುಗಿದೆ.. ಅಬ್ಬರಿಸುತ್ತಿರುವ ಗಾಳಿ ಮಳೆಯಿಂದ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ..
ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು..
ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ..ಮಲೆನಾಡು ಭಾಗಗಳಲ್ಲಂತೂ ವ್ಯಾಪಕ ಮಳೆಯಾಗುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ..ಭಾರೀ ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ..