ಅಯೋಧ್ಯೆಯಲ್ಲಿ ಇಂದು ಶ್ರೀರಾಮ ಮಂದಿರಕ್ಕೆ ಪ್ರಧಾನಿ ಮೋದಿಯವರು ಭೂಮಿಪೂಜೆ ನೆರವೇರಿಸಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೂಡ ವಿಶೇಷ ಪೂಜೆಗಳು ನೆರವೇರಿದವು.
ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನಿರ್ಮಾಣ ವಾಗಲಿ ಎಂದು ಕಾರವಾರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಕಾರವಾರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಜೆಪಿ ಕಚೇರಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಕರಸೇವಕರನ್ನು ಸನ್ಮಾನಿಸಿದರು.