ಮುಂಡಗೋಡ- ಕೊರೋನಾ ಸಂಕಷ್ಟದ ಮದ್ಯೆ ಸದ್ಯ ಮನೆಯಲ್ಲಿರೋ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಶಿಕ್ಷಣ ನೀಡಲಾಗ್ತಿದೆ.


ತಾಲೂಕಿನ ಹುನಗುಂದ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ವಾಟ್ಸ್ ಅಪ್ ಮೂಲಕವೇ ಮನೆ ಪಾಠ ನೀಡುತ್ತಿದ್ದು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.


ಪ್ರತಿದಿನ ಬೆಳಿಗ್ಗೆಯಿಂದ ರಾತ್ರಿಯವರೆಗೂ ವಾಟ್ಸ್ ಅಪ್ ಮೂಲಕವೇ ಪಾಠ ಮಾಡ್ತಿರೋ ಶಿಕ್ಷಕರು, ತಮ್ಮ ವಿದ್ಯಾರ್ಥಿಗಳ ಜೊತೆ ವಾಟ್ಸ್ ಅಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಪಾಠ ಮಾಡ್ತಿದಾರೆ. ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಗೆ ವಾಟ್ಸ್ ಅಪ್ ಮೂಲಕವೇ ಉತ್ತರಿಸುತ್ತಿದ್ದಾರೆ.
ಒಟ್ನಲ್ಲಿ, ಕೊರೋನಾದಿಂದ ನಿಂತು ಹೋಗಿದ್ದ ಶಿಕ್ಷಣ ಸದ್ಯ ವಾಟ್ಸ್ ಅಪ್ ಮೂಲಕ ಮತ್ತೆ ಚೇತರಿಕೆ ಕಂಡುಕೊಂಡಿದೆ

error: Content is protected !!