ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹನ್ಮಂತಪ್ಪ ಆಸ್ತಕಟ್ಟಿ ಇಂದು ವಿಧಿವಶರಾಗಿದ್ದಾರೆ.


ಮಾಜಿ ಸಚಿವ ಆರ್.ವಿ.ದೇಶಪಾಂಡೆ ಯವರ ಕಟ್ಟಾ ಬೆಂಬಲಿಗರಾಗಿದ್ದ ಹನ್ಮಂತಪ್ಪ ಆಸ್ತಕಟ್ಟಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು.
ಹನ್ಮಂತಪ್ಪ ಆಸ್ತಕಟ್ಟಿಯವರ ನಿಧನಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ

error: Content is protected !!