ಗೋ ಹತ್ಯೆ ನಿಷೇಧ ವಿಧೇಯಕ: ಇದು ಕೃಷಿ ಸಂಸ್ಕೃತಿಯ ಪ್ರತೀಕ- ಕಟೀಲ್*

ಮಂಗಳೂರು- ತೀವ್ರ ವಿರೋಧದ ನಡುವೆಯೂ ವಿಧಾನ ಸಭೆಯಲ್ಲಿ ಗೋ ಹತ್ಯೆ ನಿಷೇಧ ವಿದೇಯಕವನ್ನು ಮಂಡಿಸಲಾಯಿಗಿದೆ. ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರು ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿದ್ದು ಅಂಗೀಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿ ಅಂಗೀಕಾರ ಗೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಬಹು ನಿರೀಕ್ಷಿತ ಹಾಗೂ ಬಹು ಬೇಡಿಕೆಯ ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತರುವ ಪ್ರಯತ್ನ ಈ ಹಿಂದೆ ಬಿಜೆಪಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ನಡೆದಿತ್ತು . ಆದರೆ ಕಾಂಗ್ರೆಸ್ ಆಡಳಿತಕ್ಕೆ ಬಂದಾಗ ಆ ಕಾನೂನನ್ನು ಹಿಂಪಡೆದಿತ್ತು. ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೆ ಮಂಗಳೂರು ಹಾಗೂ ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಮಾಡಿದ್ದೆವು. ಇದು ಕೃಷಿ ಸಂಸ್ಕೃತಿಯ ಪ್ರತೀಕವೂ ಹಾಗೂ ರೈತರ ಪರವಾಗಿ ಇರುವಂತಹ ಕಾನೂನಾಗಿದೆ ಎಂದು ಅವರು ಹೇಳಿದರು. ಗೋಹತ್ಯಾ ನಿಷೇಧ ಕಾನೂನು ಜಾರಿಗೆ ಬಂದಿದೆ . ಇದಕ್ಕೋಸ್ಕರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಅವರನ್ನು ಅಭಿನಂದಿಸುವುದಾಗಿ ಅವರು ತಿಳಿಸಿದರು . ಈ ಕಾಯಿದೆ ವಿಧಾನಸಭೆಯಲ್ಲಿ ಇಂದು ಅಂಗೀಕಾರವಾಗಿದೆ . ವಿಧಾನಪರಿಷತ್ ನಲ್ಲೂ ಅಂಗೀಕಾರ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 

error: Content is protected !!