ಮುಂಡಗೋಡ- ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ಇಂದು ಭರವಸೆ ನೀಡಿದ್ದಾರೆ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ ಮಾಡಿದ್ದಾರೆ.
ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ ಪ್ರಚೋದನೆಗೆ ಒಳಗಾಗದೆ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕವಾಗಿ ಕರ್ತವ್ಯಕ್ಕೆ ಹಾಜರಾಗಲು ಸಚಿವರು ವಿನಂತಿಸಿದ್ದಾರೆ..
ಕೋಡಿಹಳ್ಳಿ ಚಂದ್ರಶೇಖರ ಅವರು ಅನಗತ್ಯವಾಗಿ ತಮಗೆ ಬೇಡವಾದ ಕ್ಷೇತ್ರದಲ್ಲಿ ಮೂಗು ತೂರಿಸಿ ರಾಜ್ಯದಲ್ಲಿ ಶಾಂತಿ ಕದಡುವ ಕೃತ್ಯಕ್ಕೆ ಕೈ ಹಾಕಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಇಂತಹ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ರು..