ಬೆಳಗಾವಿ- ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾದ ಹಿನ್ನೆಲೆ ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನಗಳ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧಿಸಲಾಗಿದೆ..
ನಿರ್ಬಂಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ..

ಬರೋಬ್ಬರಿ 11ತಿಂಗಳ ನಂತರ, ಕಳೆದ ಫೆ.1 ರಂದು ಮತ್ತೆ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಅವಕಾಶ ನೀಡಲಾಗಿತ್ತು..

ಬೆಳಗಾವಿ ಡಿಸಿ ಆದೇಶ ಪ್ರತಿ

ಸದ್ಯ ಪಕ್ಕದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ, ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ದೇವಸ್ಥಾನಗಳಿಗೆ ನಿರ್ಬಂಧ ವಿಧಿಸಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ..