ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕೊವಿಡ್ ನಿಂದ ಮೃತಪಟ್ಟ 55 ವರ್ಷದ ಮಹಿಳೆಯ ಅಂತಿಮ ಸಂಸ್ಕಾರವನ್ನು ಕೋವಿಡ್ ಮಾರ್ಗಸೂಚಿಯ ಅನ್ವಯ ಇಂದು ಕೊಪ್ಪ ಗ್ರಾಮದ ಹೊರವಲಯದಲ್ಲಿ ನೆರವೇರಿಸಲಾಯಿತು..
ಇಂದೂರು ಗ್ರಾಮ ಪಂಚಾಯತಿ ಸದಸ್ಯರು, ಮುಂಡಗೋಡ ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರ ನೇತೃತ್ವದಲ್ಲಿ ಕೋವಿಡ್ ನಿಯಮದ ಅನ್ವಯ ಅಂತ್ಯ ಸಂಸ್ಕಾರ ಮಾಡಲಾಯಿತು.. ಇಂದು ಬೆಳಿಗ್ಗೆ ಉಸಿರಾಟದ ತೊಂದರೆಯಿಂದ ಕೊಪ್ಪ ಗ್ರಾಮದ ಮಹಿಳೆ ಮೃತಪಟ್ಟಿದ್ದರು..