ಕಾರವಾರ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸೂಚನೆಯಂತೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.
ವಾರದ ಎರಡು ದಿನಗಳಿಗೆ ಸೀಮಿತವಾಗಿದ್ದ ಅಗತ್ಯ ವಸ್ತುಗಳ ಖರೀದಿಯ ಅವಕಾಶವನ್ನು, ನಾಳೆಯಿಂದ ಜಿಲ್ಲೆಯಲ್ಲಿ ವಾರದ ನಾಲ್ಕು ದಿನಗಳಿಗೆ, ಅಂದರೆ, ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರಗಳಿಗೂ ವಿಸ್ತರಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ..
ಇನ್ನು ಜಿಲ್ಲೆಯಲ್ಲಿ ಶುಕ್ರವಾರದಿಂದ ರವಿವಾರದವರೆಗೆ ಮೂರುದಿನ ಕಠಿಣ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಯಾರೂ ಮನೆಯಿಂದ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ.. ಹಾಗಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ..