ಬೆಂಗಳೂರು : ಕಾರ್ಮಿಕರು ಮತ್ತು ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಂತೆ ಕಾರ್ಯ ನಿರ್ವಹಿಸಿ, ಕೋವಿಡ್ ಮುಕ್ತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು.
ಬೆಂಗಳೂರಿನ CRDEI ಪ್ರೆಸ್ಟೀಜ್ ಗ್ರೂಫ್, ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಹಾಗೂ ಬಿಬಿಎಂಪಿ ಇವರ ಸಹಭಾಗಿತ್ವದಲ್ಲಿ ಬೆಂಗಳೂರು ನಗರದಲ್ಲಿ ಕಟ್ಟಡ ಕಾರ್ಮಿಕರು ಕೆಲಸ ನಿರ್ವಹಿಸುವ ಅವರವರ ಸ್ಥಳಗಳಲ್ಲಿಯೇ, ಅವರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವ್ರು ಮಾತಾನಾಡುತ್ತಿದ್ರು.
ಕಾರ್ಮಿಕರಿಗೆ ಸೌಲಭ್ಯಗಳ ಜೊತೆಗೆ ಆರೋಗ್ಯದ ಕುರಿತು ಕಾಳಜಿ ವಹಿಸಿದಾಗ ಹೊರರಾಜ್ಯದ ವಲಸೆ ಕಾರ್ಮಿಕರಿಗೂ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆದ್ದರಿಂದ, ಗುತ್ತಿಗೆದಾರರು ತಮ್ಮ ಬಳಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಲಸಿಕೆ ಕೊಡಿಸುವ ಮಹತ್ತರವಾದ ಜವಾಬ್ದಾರಿ ನಿರ್ವಹಿಸಬೇಕು ಎಂದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರ ಕಾರ್ಮಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕಾರ್ಮಿಕರು ಮತ್ತು ಉದ್ಯೋಗದಾತರನ್ನು ಸಮಾನವಾಗಿ ಅಭಿವೃದ್ಧಿಯೆಡೆಗೆ ಸಮಾಜವನ್ನು ಕೊಂಡೊಯ್ಯುವಂತೆ ಕೋರಿದರು. ಈ ಸಂದರ್ಭದಲ್ಲಿ ಹೊರರಾಜ್ಯದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ಆತ್ಮಸ್ಥೈರ್ಯ ತುಂಬಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಬಿ.ಬಿ.ಎಂ.ಪಿ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.