ಮುಂಡಗೋಡ- ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು..!
ಬೆಳಿಗ್ಗೆ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯಾ ವ್ಯಾಪ್ತಿಯ ಗ್ರಾಮಗಳ 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದರು..
ತಮ್ಮ ವಿಕಲಚೇತನದ ಗುರುತಿನ ಪ್ರಮಾಣಪತ್ರ, ಆಧಾರ್ ಕಾರ್ಡ್ ನೊಂದಿಗೆ ಬಂದು 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದ್ರು.. ತಾಲೂಕಾಡಳಿತ ಶುಕ್ರವಾರದ ಇಡೀ ದಿನ ಮುಂಡಗೋಡ ತಾಲೂಕಿನಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ..