ಬೆಂಗಳೂರು : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಕೇರಳಕ್ಕೆ 31 ರಂದು ಪ್ರವೇಶಿಸಲಿರುವ ಮುಂಗಾರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ರಾಜ್ಯ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಪ್ರವೇಶಿಸುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಮೇ. 29 ರವರೆಗೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಕಾಣಿಸಿಕೊಂಡ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ರೈತರು ಕೃಷಿ ಕಾಯಕಲ್ಲಿ ತೊಡಗಿಕೊಂಡಿದ್ದು, ಮುಂಗಾರು ಆಗಮನದ ನಿರೀಕ್ಷೆಯಲ್ಲಿದ್ದಾರೆ.