ಮುಂಡಗೋಡ- ತಾಲೂಕಾಸ್ಪತ್ರೆಯ ಆವರಣದಲ್ಲಿ ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮುಂಡಗೋಡ ತಾಲೂಕಾ ಆಸ್ಪತ್ರೆಗೆ 2 ಹೊಸ ಅಂಬ್ಯುಲೆನ್ಸ್ ಹಸ್ತಾಂತರ ಹಾಗೂ ಕೋವಿಡ್ ಶಂಕಿತರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಸಿರು ನಿಶಾನೆ ತೋರಿಸುವ ಮೂಲಕ ಅಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್, ಕೋವಿಡ್ ಶಂಕಿತರಿಗೆ ನೀಡಲಾಗುವ ಕೋವಿಡ್ ಕೇರ್ ಕಿಟ್ ಬಿಡುಗಡೆಗೊಳಿಸಿದ್ರು.

ಈ ವೇಳೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್, ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯಿತಿ ಸಿಇಓ ಪ್ರಿಯಾಂಗ್, ಶಿರಸಿ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ತಹಶೀಲ್ದಾರ್ ಶ್ರೀಧರ್ ಮುಂದಲಮನಿ, ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!