ಕಾರವಾರ: E-ಹಾಸ್ಪಿಟಲ್ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದ ಸುಮಾರು 25 ಸಿಬ್ಬಂದಿಗಳನ್ನು ಇಂದಿನಿಂದ ಕೈ ಬಿಡುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಸಿಬ್ಬಂದಿಗಳು ದಿಢೀರ್ ವಜಾದಿಂದ ದಿಕ್ಕು ತೋಚದಂತಾಗಿದ್ದಾರೆ.

ಸರ್ಕಾರ ಕಳೆದ ಒಂದು ತಿಂಗಳ ಹಿಂದೆ E-ಹಾಸ್ಪಿಟಲ್ ಅಡಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕ ಮಾಡಿಕೊಂಡಿತ್ತು. ಆಯಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ನಿರ್ದಿಷ್ಟ ಮೊತ್ತಕ್ಕೆ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವಂತೆ ಆದೇಶಿಸಿತ್ತು. ಈ ಆದೇಶದಂತೆ ಆಸ್ಪತ್ರೆಗಳು ಡಾಟಾ ಎಂಟ್ರಿ ಸಿಬ್ಬಂದಿಗಳ ನೇಮಕ ಮಾಡಿಕೊಂಡಿದ್ದವು. ಈ ಸಿಬ್ಬಂದಿಗಳಿಂದಾಗಿ ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ಸಹಾಯ ಕೂಡ ಆಗಿತ್ತು.

ಆದ್ರೆ ಈಗ ಸರ್ಕಾರ ದಿಢೀರ್ ಆದೇಶ ಹೊರಡಿಸಿದ್ದು, ಇಂದಿನಿಂದ ಸಿಬ್ಬಂದಿಗಳನ್ನು ಕೈ ಬಿಡಬೇಕು ಅಂತ ಆದೇಶದಲ್ಲಿ ತಿಳಿಸಿದೆ.

ಇದರಿಂದಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ವ್ಯಾಕ್ಸಿನೇಷನ್ ಕಾರ್ಯದಲ್ಲಿ ವ್ಯತ್ಯಯವಾಗಿದೆ. ಸರ್ಕಾರಿ ಆಸ್ಪತ್ರೆಗಳು ನಾಳೆಯಿಂದ ವ್ಯಾಕ್ಸಿನೇಷನ್ ಕಾರ್ಯಕ್ಕೆ ತೊಂದರೆಯಾಗಲಿದೆ ಅಂತ ಆಯಾ ತಹಶೀಲ್ದಾರರುಗಳಿಗೆ ಪತ್ರವನ್ನ ಸಹ ಬರೆದಿದ್ದಾರೆ. ಆದ್ರೆ ಸರ್ಕಾರ ಮುಂದೆ ಏನು ಕ್ರಮ ಕೈಗೊಳ್ಳತ್ತೊ ಕಾದು ನೋಡಬೇಕಿದೆ

error: Content is protected !!