ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಬಂಧನಕ್ಕೊಳಗಾದವರು.
ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ. 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ನಡೆಸಲಾಗಿದೆ.
ಇದೇ ವೇಳೆ ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ವಶಪಡಿಸಿಕೊಂಡಿದ್ದಾರೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.