12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು.

ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.