ಬೆಂಗಳೂರು: ಕನ್ನಡ ಚಿತ್ರರಂಗ ಹಿರಿಯ ಪೋಷಕ ನಟಿ ಬಿ.ಜಯಾ ಇಂದು ಕೊನೆಯುಸಿರು ಎಳೆದಿದ್ದಾರೆ. ಅನೇಕ ಹಿರಿಯ ನಟರೊಂದಿಗೆ ನಟಿಸಿದ್ದ ನಟಿಯ ನಿಧನಕ್ಕೆ ಚಿತ್ರರಂಗವೇ ಕಣ್ಣೀರು ಸುರಿಸಿದೆ.
1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಅಣ್ಣಾವ್ರ ಅತೀ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು.
6 ದಶಕಗಳ ಕಾಲ ಸಿನಿರಂಗದಲ್ಲಿ ನಿರಂತರವಾಗಿಿ ಸೇವೆ ಸಲ್ಲಿಸಿದ ಹಿರಿಮೆ ಅವರಿಗಿದೆ. ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಹಲವಾರು ದಿಗ್ಗಜ ನಟರ ಜತೆ ಅಭಿನಯಸಿದ್ದ ಹಿರಿಯ ನಟಿಯನ್ನು ಕನ್ನಡ ಚಿತ್ರರಂಗ ಕಳೆದುಕೊಂಡಿದೆ.