ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು.
ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಜಿ ಗಾಂವ್ಕರ್, ಯುವ ನಾಯಕ ವಿವೇಕ್ ಹೆಬ್ಬಾರ್, ಪ್ರಮುಖರಾದ ವಿಜಯ ಮಿರಾಶಿ, ಗಣಪತಿ ಮುದ್ದೆಪಾಲ ಹಾಗೂ ತಹಶೀಲ್ದಾರರಾದ ಕೃಷ್ಣ ಕಾಮ್ಕರ್ ಹಾಗೂ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.