ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಜುಲೈ ಕೊನೆಯ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.