ಕಾರವಾರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಜಿಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು
ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಹೊತ್ತಿಕೊಂಡಿರೋ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಕಚೇರಿಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ.
ಸ್ಥಳಕ್ಕೆ ಡಿಸಿ ಮುಲೈ ಮುಹಿಲನ್, ಸಿಇಒ ಪ್ರಿಯಾಂಗ ಭೇಟಿ ನೀಡಿದ್ದಾರೆ.
ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.