ಮುಂಡಗೋಡ: ತಾಲೂಕಿನಲ್ಲಿಂದು19 ಪಾಸಿಟಿವ್ ದೃಢ, 57 ಗುಣಮುಖ, ಒಂದು ಸಾವು..!

ಮುಂಡಗೋಡ-ತಾಲೂಕಿನಲ್ಲಿ ಇಂದು 19 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 57 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ತಾಲೂಕಿನಲ್ಲಿ ಒಟ್ಟೂ 291 ಸಕ್ರೀಯ ಪ್ರಕರಣಗಳಿದ್ದು, 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 204 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 25 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ.

ಇನ್ನು ಪಟ್ಟಣದ ಗಾಂಧಿನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 65 ಕ್ಕೆ ಏರಿಕೆಯಾಗಿದೆ.

ಅಂದಹಾಗೆ, ಇದುವರೆಗೂ ತಾಲೂಕಿನಲ್ಲಿ 3730 ಪ್ರಕರಣಗಳು ಪತ್ತೆಯಾಗಿದ್ದು ಅದ್ರಲ್ಲಿ,3374 ಸೋಂಕಿತರು ಗುಣಮುಖರಾಗಿದ್ದಾರೆ.

error: Content is protected !!