ಶಿರಸಿ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಇಂದು ಶಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ, ಬಿಸಲಕೊಪ್ಪ, ಅಂಡಗಿ ಹಾಗೂ ಸುಗಾವಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದರು.

ಸ್ಥಳೀಯ ಜನಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು ಹಾಗೂ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಬ್ಬಾರ್ ಕೋವಿಡ್ ಕೇರ್ ಕಿಟ್ ಅನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಆಶಾ ಕಾರ್ಯಕರ್ತೆರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

error: Content is protected !!