ಮುಂಡಗೋಡ-ಪಟ್ಟಣದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಇಂದಿನಿಂದ ಪ್ರಾರಂಭವಾಗಿದೆ. ನಿನ್ನೆಯಷ್ಟೇ ಉತ್ತರ ಕನ್ನಡ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರ.
ಈ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರ ಹೀಗೆ ನಾಲ್ಕು ದಿನಗಳ ಕಾಲ, ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ನೀಡಲಾಗಿದೆ.
ಹೀಗಾಗಿ ಇಂದು ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿಗೆ ಜನ ಮುಗಿಬಿದ್ದಿದ್ರು. ಇಲ್ಲಿನ ದಿನಸಿ ಅಂಗಡಿಗಳ ಎದುರು ಜನ ಜಂಗುಳಿಯೇ ಸೇರಿತ್ತು. ಇನ್ನು ಅನಗತ್ಯ ತಿರುಗಾಡುವ ವಾಹನಗಳ ಬಗ್ಗೆ ಪೊಲಿಸ್ರು ಹದ್ದಿನ ಕಣ್ಣು ಇಟ್ಟಿದ್ರು..