ಮುಂಡಗೋಡ: ತಾಲೂಕಿನ ಕಾಳಗಿನಕೊಪ್ಪದ ಮಹಿಳೆಯರು ಸಿಡಿದು ನಿಂತಿದ್ದಾರೆ. ತಮ್ಮ ಗ್ರಾಮದಲ್ಲಿ ಯುವಕರನ್ನ ದಾರಿ ತಪ್ಪಿಸ್ತಿರೋ ಸರಾಯಿ, ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ.

ಹೌದು, ಮುಂಡಗೋಡ ತಾಲೂಕಿನ ಕಾಳಗಿನ ಕೊಪ್ಪದ ಮಹಿಳೆಯರಿಗೆ ಇವತ್ತು ಆಕ್ರೋಶದ ಕಟ್ಟೆಯೊಡೆದಿದೆ. ನಿತ್ಯವೂ ಕುಡಿದು ನಶೆಯಲ್ಲಿ ತೇಲಾಡುವ, ಗುಟ್ಕಾ ತಿಂದು ಕಂಡ ಕಂಡಲ್ಲೆ ಗಲೀಜು ಮಾಡುವ, ಸಿಗರೇಟು ಸೇದುತ್ತು ಮಸ್ತಿ ಮಾಡುವ ಯುವಕರನ್ನು ಹಾಗೂ ತಮ್ಮ ಮನೆ ಯುವ ಹುಡುಗರನ್ನು ಹೇಗಾದ್ರೂ ಸರಿ ದಾರಿಗೆ ತರಲೇ ಬೇಕು ಅಂತಾ ಟೊಂಕ ಕಟ್ಟಿ ನಿಂತಿದ್ರು.

ಅಂದಹಾಗೆ, ಕಾಳಗಿನಕೊಪ್ಪದ ಮಹಿಳೆಯರು ಇಂದು ಗ್ರಾಮದಲ್ಲಿನ ಕೆಲವು ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರಿಗೂ ತಕ್ಕ ಪಾಠ ಕಲಿಸಿದ್ದಾರೆ.ಮದ್ಯ ಮಾರಾಟ ಮಾಡುವ ಅಂಗಡಿಗಳಲ್ಲಿನ ಮದ್ಯದ ಬಾಕ್ಸ್ ಗಳನ್ನು ಹೊರಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ಮೇಲೆ ಗ್ರಾಮದಲ್ಲಿ ಮದ್ಯ ಮಾರಾಟ ಮಾಡಿದ್ರೆ ಹುಶಾರ್ ಅಂತಾ ಎಚ್ಚರಿಸಿದ್ದಾರೆ.

ಅಂದಹಾಗೆ, ಮುಂಡಗೋಡ ತಾಲೂಕಿನಲ್ಲಿ ಅಧಿಕೃತ ಸರಾಯಿ ಅಂಗಡಿಗಳು ಎಷ್ಟಿವೆಯೋ ಗೊತ್ತಿಲ್ಲ, ಆದ್ರೆ ಅನಧೀಕೃತವಾಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಯಥೇಚ್ಚವಾಗಿ ಸಿಗುತ್ತಿದೆ. ಹೀಗಾಗಿ, ಯುವ ಪಡೆ ನಿತ್ಯವೂ ಕುಡಿತದ ದಾಸರಾಗುತ್ತಿದ್ದಾರೆ ಅಂತಾ ಪೋಷಕರು ಇನ್ನಿಲ್ಲದ ಸಂಕಟ ಅನುಭವಿಸುತ್ತಿದ್ದಾರೆ.

ಸಂಬಂಧಪಟ್ಟ ಅಭಕಾರಿ ಇಲಾಖೆಯ ಅಧಿಕಾರಿಗಳು ಅದ್ಯಾಕೆ ಕಣ್ಣು ಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ, ತಾಲೂಕಿನ ಹಲವು ಗ್ರಾಮಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟವಾಗುತ್ತಿರೋದು ಬಹಿರಂಗ ಸತ್ಯವಾಗಿದೆ.

error: Content is protected !!