ದೇವರಹಿಪ್ಪರಗಿ: ತಾಲೂಕಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಿರುವುದಾಗಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್ ಹೇಳಿದ್ರು.

ದೇವರಹಿಪ್ಪರಗಿ ತಾಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ಬಿತ್ತನೆ ಬೀಜ ಕೊರತೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ದಾಸ್ತಾನು ಮಾಡಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು ರೈತರು ಬಿತ್ತನೆ ಬೀಜಗಳು ದೊರಕುವ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸಮಯಕ್ಕೆ ಸರಿಯಾಗಿ ಎಲ್ಲರಿಗೂ ಬಿತ್ತನೆಬೀಜ ದೊರಕುತ್ತದೆ.
ರೈತರು ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಬಿತ್ತನೆ ಬೀಜಗಳನ್ನು ಖರೀದಿ ಮಾಡಬೇಕು ಎಂದು ಕರೆ ನೀಡಿದ್ರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ವೈ ಸಿಂಗೆಗೋಳ ಪ್ರಾಸ್ತಾವಿಕವಾಗಿ ಮಾತನಾಡಿದರು.
