ಹಿರಿಯ ಬಿಜೆಪಿ ಶಾಸಕ ಸಿ.ಎಂ.ಉದಾಸಿ ವಿಧಿವಶ..!

ಹಾನಗಲ್- ಹಿರಿಯ ಬಿಜೆಪಿ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ(86) ವಿಧಿವಶವಾಗಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಉದಾಸಿಯವರನ್ನು ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಅಂತಲೇ ಖ್ಯಾತಿ ಪಡೆದಿದ್ದ ಸಿ.ಎಂ.ಉದಾಸಿಯ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪಬ್ಲಿಕ್ ಫಸ್ಟ್ ನ್ಯೂಸ್ TOP 5 ನ್ಯೂಸ್ ವೀಕ್ಷಿಸಲು ಈ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ..

https://youtu.be/712rEAKhVeE