ಬಿಜೆಪಿ ಹಿರಿಯ ಶಾಸಕ ಉದಾಸಿ ಅಸ್ತಂಗತ: ಹಾನಗಲ್ ನಲ್ಲಿ ಬುಧವಾರ ಸಂಜೆ 4 ಕ್ಕೆ ಅಂತ್ಯಕ್ರಿಯೆ

ಹಾನಗಲ್: ಬಿಜೆಪಿಯ ಹಿರಿಯ ಶಾಸಕ ಮಾಜಿ ಸಚಿವ ಸಿ.ಎಂ.ಉದಾಸಿ ನಿಧನರಾದ ಹಿನ್ನೆಲೆಯಲ್ಲಿ,
ನಾಳೆ ಬುಧವಾರ ಸಂಜೆ 4 ಗಂಟೆಗೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ‌ ನಡೆಯಲಿದೆ ಅಂತಾ ಆಪ್ತ ಮೂಲಗಳು ತಿಳಿಸಿವೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಹಾನಗಲ್ ಪಟ್ಟಣಕ್ಕೆ ಆಗಮಿಸಲಿರೋ ಶಾಸಕ ಉದಾಸಿಯವರ ಪಾರ್ಥೀವ ಶರೀರವನ್ನು, ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಗೌಳಿ ಗಲ್ಲಿಯಲ್ಲಿರೋ ಅವರ ನಿವಾಸಕ್ಕೆ ತರಲಾಗುತ್ತದೆ.

ಮದ್ಯಾಹ್ನ 2 ಗಂಟೆ ನಂತರ ಪಟ್ಟಣದ ವಿರಕ್ತಮಠದ ಆವರಣದಲ್ಲಿ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಜೆ 4 ಗಂಟೆಗೆ ಲಿಂಗಾಯತ ವಿಧಿ ವಿಧಾನದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಅಂತಾ ಮಾಹಿತಿ ಲಭ್ಯವಾಗಿದೆ.

*******************

ಪಬ್ಲಿಕ್ ಫಸ್ಟ್ ನ್ಯೂಸ್ ನ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..

https://youtu.be/9EuO4Ibd8dU

error: Content is protected !!