ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.