ಮುಂಡಗೋಡ: ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಂಡಗೋಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯಕ್ ಮುಂಡಗೋಡ ಉಸ್ತುವಾರಿಗಳಾದ ಸುರೇಶ್ ಸವಣೂರು, ಎಂ ಎನ್ ದುಂಡಿಸಿ, ಅಲಿ ಹಸನ್ ಬೆಂಡಿಗೇರಿ, ಧರ್ಮರಾಜ್ ನಡಿಗೇರ, ರಾಜು ಹಿರೇಮಠ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಗೌಸ್ ಮಕಾನದಾರ, ಜಾಫರ ಹಂಡಿ, ನಾಗರಾಜ ಹಂಚಿನಮನಿ, ರಾಜು ಬೋವಿ, ಮಲ್ಲು ಗೌಳಿ, ಜೈನೂ ಬೆಂಡಿಗೇರಿ, ಅಲ್ಲಾವುದ್ದೀನ್, ಬಸವರಾಜ ಆಸ್ತಕಟ್ಟಿ, ಆಶಿಫ್ ಮಕಾಂದಾರ ಸೇರಿದಂತೆ ತಾಲ್ಲೂಕಿನ ಮುಖಂಡರುಗಳು, ಘಟಕದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು