ಮುಂಡಗೋಡ: ರಾಜ್ಯ ಬಿಜೆಪಿ ಸರಕಾರ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾ “ಶ್ರಮಿಕರಿಗೆ ನೆರವು ” ಕಾರ್ಯಕ್ರಮ ಆಯೋಜಿಸಿದೆ.
ಯಲ್ಲಾಪುರ ಕ್ಷೇತ್ರದ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಕಾರ್ಯಕ್ರಮ ಉದ್ಘಾಟಿಸಿ, ಅಸಂಘಟಿತ ಕಾರ್ಮಿಕರು ಸರ್ಕಾರದ ಘೋಷಿಸಿರೋ ಸಹಾಯಧನ ಪಡೆದುಕೊಳ್ಳುವಂತೆ ಕರೆ ನೀಡಿದ್ರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕಾ ಅಧ್ಯಕ್ಷ ಗಣೇಶ ಶಿರಾಲಿ, ಪಟ್ಟಣ ಪಂಚಾಯತ ಉಪಾಧ್ಯಕ್ಷ ಮಂಜುನಾಥ ಹರ್ಮಲಕರ್ , ಪಕ್ಷದ ಮುಖಂಡರಾದ ಉಮೇಶ್ ಬಿಜಾಪುರ, ರವಿ ಹಾವೇರಿ, ಹಾಗೂ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು ಕಾರ್ಮಿಕರು ಉಪಸ್ಥಿತರಿದ್ದರು.