ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ.


ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ.

ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ ಮುಂಡಗೋಡ ಪಟ್ಟಣದ ಆನಂದನಗರ ನಿವಾಸಿ 45 ವರ್ಷದ ಮಹಿಳೆ ಕೋವಿಡ್ ಗೆ ಬಲಿಯಾಗಿದ್ದಾರೆ ಅಂತಾ ಮುಂಡಗೋಡ ತಹಶೀಲ್ದಾರರು ಮಾಹಿತಿ ನೀಡಿದ್ದಾರೆ.

error: Content is protected !!