ಶಿಗ್ಗಾವಿ: ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 40 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಲಾದ ಘಟನೆ ಶಿಗ್ಗಾವಿ ಪಟ್ಟಣದಲ್ಲಿ ನಡದಿದೆ.

ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವ ಗೋಡಾನ್ ಮೇಲೆಯೇ ದಾಳಿ ನಡೆಸಿರೋ ಪೊಲೀಸರು, 86 ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ತುಂಬಿಡಲಾಗಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಹನುಮಂತಪ್ಪ ಬಡ್ನಿ ಎಂಬುವವರಿಗೆ ಸೇರಿದ ಮನೆಯಲ್ಲಿ, 40 ಕ್ವಿಂಟಲ್ 95 ಕೇಜಿ ಅಕ್ಕಿ ದೊರೆತಿದೆ.

ಖಚಿತ ಮಾಹಿತಿ ಮೇರೆಗೆ ಶಿಗ್ಗಾವಿ ಪೊಲೀಸರು ದಾಳಿ ಮಾಡಿದ್ದು, ಅಕ್ಕಿ ಸೇರಿದಂತೆ ಒಂದು ಟಾಟಾ ಎಸ್ ವಾಹನ ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!