ಮುಂಡಗೋಡ: ತಾಲೂಕಿನ ಅಗಡಿ ಸಮೀಪದ ಶಾಂತಾ ದುರ್ಗಾ ರೈಸ್ ಮಿಲ್ ಬಳಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕಲಘಟಗಿ ತಾಲೂಕಿನ ಶಿಗ್ಗಟ್ಟಿ ಗ್ರಾಮದ ಶೇಖಪ್ಪಾ ಲಮಾಣಿ ಗಾಯಗೊಂಡ ಬೈಕ್ ಸವಾರ ಅಂತಾ ತಿಳಿದು ಬಂದಿದೆ. ಬೈಕ್ ನ ಹಿಂದಿನ ಗಾಲಿ ಪಂಕ್ಚರ್ ಆಗಿದ್ದ ಕಾರಣಕ್ಕೆ ಸ್ಕಿಡ್ ಆಗಿ ಬಿದ್ದಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ಹೀಗಾಗಿ, ಸ್ಥಳೀಯರು ಕೂಡಲೇ ಅಂಬ್ಯುಲೆನ್ಸ್ ತರಿಸಿ ಗಾಯಗೊಂಡ ಬೈಕ್ ಸವಾರನನ್ನು ಕಲಘಟಗಿ ತಾಲೂಕಾ ಆಸ್ಪತ್ರೆಗೆ ರವಾನಿಸಿದ್ದಾರೆ.

error: Content is protected !!