ಸವಣೂರು: ತಾಲೂಕಿನ ಮಂಟಗಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಇಂದು “ಆರೋಗ್ಯ ತಪಾಸಣೆ ಶಿಬಿರ” ಏರ್ಪಡಿಸಲಾಗಿತ್ತು.
ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು, ಗುರುಮಾತೆಯರು, ಆರೋಗ್ಯ ವೈದ್ಯಾಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಣ ಪ್ರೇಮಿಗಳು, ಹಾಗೂ ಗ್ರಾಮದ ಮುಖಂಡರುಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಾಲೆಯ ಮುಖ್ಯ ಶಿಕ್ಷಕರು, ಪ್ರಾಸ್ತಾವಿಕ ನುಡಿಗಳನ್ನು ಆಡಿ, ಈಗಿನ ಮಕ್ಕಳಿಗೆ ಆರೋಗ್ಯ ಚೆನ್ನಾಗಿದ್ದರೆ ಮುಂದೆ ಸದೃಢ ದೇಹ ಹಾಗೂ ದೇಶ ಕಟ್ಟಬಹುದು ಎಂಬುದನ್ನು ಮಾರ್ಮಿಕವಾಗಿ ನುಡಿದರು.
ವೈದ್ಯಾಧಿಕಾರಿಗಳು ಮಕ್ಕಳನ್ನು ತಪಾಸಣೆ ಮಾಡಿ ಸೂಕ್ತ ಔಷಧಿಗಳನ್ನು ನೀಡಿ ಹಾಗೂ ಮಕ್ಕಳ ಪಾಲನೆ ಪೋಷಣೆ ಬಗ್ಗೆ ಮಾರ್ಗ ದರ್ಶನ ನೀಡಿದರು. ಸಹ ಶಿಕ್ಷಕರು ಗುರುಮಾತೆಯರು ವಂದನಾರ್ಪಣೆ ಸಲ್ಲಿಸಿದರು.